ಬ್ರೇಕಿಂಗ್ ನ್ಯೂಸ್
19-02-23 09:39 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಬಹಿರಂಗ ಜಟಾಪಟಿಗೆ ಈಗ, ಆತ್ಮಹತ್ಯೆ ಮಾಡಿಕೊಂಡ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಎಂಟ್ರಿ ಕೊಟ್ಟಿದ್ದಾರೆ.
ರೂಪಾ ಅವರು ಸಿಂಧೂರಿ ಅವರ ವಿರುದ್ಧ 19 ಗಂಭೀರ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರವೂ ಸೇರಿತ್ತು. ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಹಲವು ವಿಚಾರಗಳನ್ನು ಪೋಸ್ಟ್ ಮಾಡಿದ್ದಾರೆ.
ʻʻನನ್ನ ಪ್ರಶ್ನೆ ಇಷ್ಟೇ. ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ಕೇಳಿದ್ದಾರೆ.
ಈ ಎಲ್ಲಾ ನಾಟಕಗಳನ್ನು ದೂರದಿಂದಲೇ ನೋಡುತ್ತಿದ್ದ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಯಾವ ವಿಚಾರವನ್ನೂ ಉಲ್ಲೇಖ ಮಾಡದೆ ಒಂದು ಕಮೆಂಟ್‌ನ್ನು ಟ್ವೀಟ್ ಮೂಲಕ ತನ್ನ ಟ್ವಿಟ್ಟರ್ ಖಾತೆಯಲ್ಲಿ ʻKarma will get back to you, sooner or later it surely willʼ ಎಂದು ಟ್ವೀಟ್ ಮಾಡಿದ್ದಾರೆ ಕುಸುಮಾ. ʻʻತಾನು ಮಾಡಿದ ಪಾಪವು ತನಗೇ ವಾಪಸ್ ಬರುತ್ತದೆ, ತಕ್ಷಣಕ್ಕೆ ಆಗಬಹುದು ಅಥವಾ ತಡವಾಗಬಹುದು.. ಆದರೆ ಖಂಡಿತಾ ಬಂದೇ ಬರುತ್ತದೆʼʼ ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ಇನ್ನೊಂದು ಹೇಳಿಕೆಯಲ್ಲಿ ಡಿ. ರೂಪಾ ಅವರ ಹೇಳಿಕೆಗೆ ಸಹಮತವಿದೆ ಎಂದಿದ್ದಾರೆ.
A war has started between women IAS-IPS in Karnataka. IPS officer D. Roopa has issued a 19-point charge sheet against IAS officer Rohini Sindhuri. Rohini Sindhuri has responded to Roopa’s allegations and said that she is personally harassing me. As the talk war between the two intensified, Kusuma Hanumantharayappa, wife of late IAS officer DK Ravi, Congress leader Kusuma Hanumantharayappa made an entry.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
29-03-25 11:04 pm
Mangalore Correspondent
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
Udupi Love Jihad, Kidnap, Crime: ಇಂಜಿನಿಯರಿಂಗ್...
29-03-25 05:20 pm
Kundapura accident: ಬಳ್ಕೂರಿನಲ್ಲಿ ಸ್ಕೂಟರಿಗೆ ಕಾ...
28-03-25 11:16 pm
Mangalore University, Rajendra Kumar, Rohan M...
28-03-25 07:38 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm