ಬ್ರೇಕಿಂಗ್ ನ್ಯೂಸ್
20-02-23 02:22 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಐಪಿಎಸ್ ಅಧಿಕಾರಿ ಡಿ.ರೂಪ ಅವರು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ರೋಹಿಣಿ ಸಿಂಧೂರಿಯವರ ವೈಯಕ್ತಿಕ ಫೋಟೋ ಹಾಗೂ ಲೋಕಯುಕ್ತಗೆ ದೂರು ನೀಡಿದ್ದರ ಬಗ್ಗೆ ಫೋಟೋಗಳನ್ನ ಶೇರ್ ಮಾಡಿದ್ದರು.
ಈ ಸಂಬಂಧ ಇದೇ ಮೊದಲ ಬಾರಿಗೆ ರೋಹಿಣಿ ಸಿಂಧೂರಿಯವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ರೋಹಿಣಿ ಸಿಂಧೂರಿಯವರು, ಗೆಟ್ ವೆಲ್ ಸೂನ್. ಈ ತರ ಮಾಡುವುದು ಸರಿಯಲ್ಲ. ಇದನ್ನು ಇಲ್ಲಿಗೆ ಸುಮ್ಮನೇ ಬಿಡುವುದಿಲ್ಲ. ಫ್ರೊಪೆಷನಲ್ ಆಗಿ ಏನೇ ಮಾಡಲಿ ಆ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಆದ್ರೆ ವೈಯಕ್ತಿಕವಾಗಿ ಅವರು ತೇಜೋವಧೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಡುವ ಮಾತೇ ಇಲ್ಲ. ಈಗಾಗಲೇ ನನ್ನ ಗಂಡ ಎಲ್ಲವನ್ನು ಮಾತನಾಡಿದ್ದಾರೆ. ಈ ಬಗ್ಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ಐಎಎಸ್ ಅಧಿಕಾರಿ ಹೇಳಿದ್ದಾರೆ.
ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸೂಚನೆ;
ಇನ್ನು ಈ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಅವರಿಗೆ ಸೂಚನೆ ನೀಡಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ತಮ್ಮ ಖಾಸಗಿ ಫೋಟೊಗಳನ್ನು ಐಎಎಸ್ ಪುರುಷ ಅಧಿಕಾರಿಗಳಿಗೆ ಒನ್ ಟು ಒನ್ ಕಳುಹಿಸಿದ್ದಾರೆ. ಫೋಟೋ ಕಳಹಿಸಿದ್ದರ ಹಿಂದಿನ ಸನ್ನಿವೇಶ, ಯಾಕೆ? ಕಳಹಿಸಿದ್ದು ಎಂಬಿತ್ಯಾದಿ ಕುರಿತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಪೋಸ್ಟ್ ಹಾಕಿದ್ದರು. ಅದರು ವೈರಲ್ ಆಗುತ್ತಿದ್ದಂತೆ ಸಾಕಷ್ಟು ವಿಚಾರಗಳು ಚರ್ಚೆಗೆ ಬಂದು ಈ ಇಬ್ಬರ ನಡುವಿನ ಜಟಾಪಟಿ ಹೆಚ್ಚಾಯಿತು.
ಪ್ರಕರಣ ಸಂಬಂಧ ರಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಧಿಕಾರಿಗಳ ವರ್ತನೆ ಬಹಳ ಬೇಸರ ತರಿಸಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರು ಎಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಪೊಲೀಸ್ ಮಾಹಾನಿರ್ದೇಶಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಲಾಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಈ ಹಿಂದೆ ಸಹ ಈ ಇಬ್ಬರಿಗೆ ನೋಟಿಸ್ ನೀಡಲಾಗಿತ್ತು ಎಂದು ಹೇಳಿದರು.
IAS vs IPS, Sindhuri and Roopa battle, Sindhuri slams roopa says get well soon. Causing a flutter in the State bureaucracy, two senior women bureaucrats indulged in a public quarrel on social media on Sunday. A woman IPS officer took to social media to accuse a woman IAS officer of several wrongdoings. She also released the woman IAS officer’s personal pictures allegedly shared with a few male officers.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm