ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ ; ಬಿಲ್ಲವ, ಈಡಿಗ ಸಮುದಾಯದ ಬಹುದಿನಗಳ ಬೇಡಿಕೆಗೆ ಅಸ್ತು 

20-02-23 07:24 pm       Bangalore Correspondent   ಕರ್ನಾಟಕ

ರಾಜ್ಯದ ಬಿಲ್ಲವ/ಈಡಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಬೆಂಗಳೂರು, ಫೆ.20 : ರಾಜ್ಯದ ಬಿಲ್ಲವ/ಈಡಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ನಿರ್ವಹಿಸಲಿದೆ ಎಂದಿದ್ದಾರೆ. 

ರಾಜ್ಯ ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2 ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. 

ಆದೇಶ ಪತ್ರದಲ್ಲಿ ಯಾವುದೇ ಅನುದಾನದ ಉಲ್ಲೇಖ ಇಲ್ಲ. ಬಿಲ್ಲವ ಮುಖಂಡರು ಅಭಿವೃದ್ಧಿ ನಿಗಮದ ಜೊತೆಗೆ ಸಮುದಾಯದ ಏಳಿಗೆ ಉದ್ದೇಶದಿಂದ 500 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹ ಮಾಡಿದ್ದರು. ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

formation of Narayana Guru corporation established by CM Bommai. The Billava community was expecting the Narayan Guru Corporation's announcement in the budget that was presented by the CM on Friday.