ರಣರಂಪ ಮಾಡಿದ ಮಹಿಳಾ ಅಧಿಕಾರಿಗಳಿಗೆ ಎತ್ತಂಗಡಿ ಶಿಕ್ಷೆ ; ಇಬ್ಬರನ್ನು ಎತ್ತಿ ಒಗಾಯಿಸಿದ ರಾಜ್ಯ ಸರ್ಕಾರ

21-02-23 02:30 pm       Bengaluru Correspondent   ಕರ್ನಾಟಕ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು, ಫೆ.21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್​ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ ಸಂಘರ್ಷ ತಾರಕಕ್ಕೇರಿತ್ತು. ರೋಹಿಣಿ ಸಿಂಧೂರಿ ಅವರು ಜೆಡಿಎಸ್ ಶಾಸಕ ಸಾರಾ ಮಹೇಶ್ ಜತೆ ಸಂಧಾನಕ್ಕೆ ತೆರಳಿದ್ದರು ಎಂಬ ಬಗ್ಗೆ ವರದಿಯಾದ ಬೆನ್ನಲ್ಲೇ ಅವರ ವಿರುದ್ಧ ಡಿ ರೂಪಾ ಆರೋಪಗಳ ಸುರಿಮಳೆಯನ್ನೇ ಮಾಡಿದ್ದರು. ನಂತರ ಪ್ರಕರಣ ರಾಜಕೀಯ ವಲಯದಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

Two top Karnataka women officers transferred without posting after fight on social media over sharing private photos.  IPS officer D Roopa Moudgil, IAS officer Rohini Sindhuri transferred without posting after fight on social media over sharing private photos. Two women officers whose public squabbling has stunned the Karnataka administration have been transferred without a posting a day after they both complained against each other to the state's top bureaucrat, the Chief Secretary.