ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm