ಬ್ರೇಕಿಂಗ್ ನ್ಯೂಸ್
24-02-23 03:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಜನರಿಗೆ ಮೂರನೇ ಗ್ಯಾರಂಟಿ ಯೋಜನೆಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ. ಉಳಿತಾಯ ಮಾಡಲು ಸಹಕಾರ ನೀಡುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದರು.
Karnataka Congress on Friday announced its third 'guarantee' ahead of Assembly elections, promising 10 kg of free rice per month for Below Poverty Line (BPL) cardholders. Each person currently getting 5 kg of rice under the Anna Bhagya scheme will get 10 kg free rice, the party announced.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm