2023 ವೃತ್ತಿಪರ ಕೋರ್ಸ್​​​​​ಗಳ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ

24-02-23 10:36 pm       Bangalore Correspondent   ಕರ್ನಾಟಕ

ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ CET ದಿನಾಂಕ ನಿಗದಿಯಾಗಿದ್ದು, ಮೇ 20ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಆರಂಭವಾಗಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಫೆ.24: ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ CET ದಿನಾಂಕ ನಿಗದಿಯಾಗಿದ್ದು, ಮೇ 20ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಆರಂಭವಾಗಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.

ಅದ್ರಂತೆ, 20 ಮತ್ತು 21ರಂದು ಸಿಇಟಿ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಹೊರ ನಾಡು, ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತೆ. ಇನ್ನು ಮೇ 22ರಂದು ಸಿಇಟಿ ಅಂಗವಾಗಿ ಕನ್ನಡ ಪರೀಕ್ಷೆ ನಡೆಸಲಾಗುವುದು. ಅಂದ್ಹಾಗೆ, ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಈ ಸಿಇಟಿ ಪರೀಕ್ಷೆ ನಡೆಸಲಾಗುತ್ತೆ

ಪಿಯುಸಿ ತೇರ್ಗಡೆಯ ನಂತರ ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕು. ಈ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ಕೋರ್ಸ್​ಗಳ ಕಾಲೇಜು ಸೀಟು ಹಂಚಿಕೆಯಾಗಲಿದೆ.

Karnataka CET Exam Date 2023 announced, May 20th is the entrance exam.