ಬ್ರೇಕಿಂಗ್ ನ್ಯೂಸ್
24-02-23 10:48 pm HK News Desk ಕರ್ನಾಟಕ
ಶಿವಮೊಗ್ಗ, ಫೆ.24: ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಿದ್ದವಾಗಿದ್ದು, ಇದೇ ಫೆ. 27 ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗ ಕುವೆಂಪು ವಿಮಾನ ನಿಲ್ದಾಣದ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆಗೂ ಮೊದಲೇ ಮೋದಿ ಅವರು ವಿಮಾನ ನಿಲ್ದಾಣದ ಕುರಿತು ಟ್ವೀಟ್ ಮಾಡಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಸಾಗಲಿ ಎಂದು ಹಾರೈಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದ ಡ್ರೋನ್ ವಿಡಿಯೋವನ್ನು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದರ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಳಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಸಾಗಲಿ ಎಂದು ಮೋದಿ ಅವರು ಹಾರೈಸಿದ್ದಾರೆ.
ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಡ್ರೋನ್ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾದ ಶಿವಮೊಗ್ಗ ವಿಮಾನ ನಿಲ್ದಾಣದ ವಿಡಿಯೋವನ್ನು ಗುರುವಾರ ಟ್ವೀಟ್ ಮಾಡಿದ್ದು, ಈ ಟ್ವೀಟ್ ಗೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಬಗ್ಗೆ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದು, “ಮಲೆನಾಡಿನ ಜನರ ದಶಕಗಳ ಕನಸು ಕೊನೆಗೂ ನನಸಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕೇವಲ ವಿಮಾನ ನಿಲ್ದಾಣವಾಗಿರದೇ ಮಲೆನಾಡು ಪ್ರದೇಶದ ಪರಿವರ್ತನೆಯ ಹೆಬ್ಬಾಗಿಲಾಗಿ ರೂಪುಗೊಳ್ಳಲಿದೆ ” ಎಂದಿದ್ದಾರೆ.
ಫೆ. 27 ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದು, ಅದೇ ದಿನ ಮೋದಿ ಅವರೇ ವಿಮಾನ ನಿಲ್ದಾಣಕ್ಕೆ ಕುವೆಂಪು ಎಂಬ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವನ್ನು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿನಿಧಿಸಿದ್ದರು. ಇಲ್ಲಿಗೆ ವಿಮಾನ ನಿಲ್ದಾಣವಾಗಬೇಕು ಎಂದು ಹೇಳಿದವರಲ್ಲಿ ಅವರೇ ಮೊದಲಾಗಿದ್ದರು. ಈ ಕಾರಣಕ್ಕೆ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬ ಮಾತು ಕೇಳಿಬಂದಿತ್ತು. ಇದು ಚರ್ಚೆಗೂ ಕಾರಣವಾಗಿತ್ತು. ಆದರೆ ಈ ಚರ್ಚೆಗೆ ಸ್ವತಃ ಅವರೇ ತೆರೆ ಎಳೆದಿದ್ದು, ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕಿಡಲು ಯಡಿಯೂರಪ್ಪ ನಿರ್ಧರಿಸಿದರು.
ಚುನಾವಣೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಇದು ಸರಕಾರಿ ಕಾರ್ಯಕ್ರಮವಾದ್ದರಿಂದ ಅದ್ದೂರಿಯಾಗಿ ಮತ್ತು ಭಾರಿ ಜನಸಾಗರದೊಂದಿಗೆ ಪ್ರಧಾನಿಯನ್ನು ಸ್ವಾಗತಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸಿದ್ಧತೆ ನಡೆಸಿವೆ. ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಮಾತ್ರ ಉಳಿದಿರುವುದರಿಂದ ಆಡಳಿತ ಪಕ್ಷವಾದ ಬಿಜೆಪಿಯು ಭಾರಿ ಜನಸ್ತೋಮವನ್ನು ಸೇರಿಸಿ ಜನಮನ ಸೆಳೆಯುವ ಪ್ರಯತ್ನ ಕೂಡ ನಡೆಸಿದೆ.
ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲೂ ಕಮಲದ ಅಲಂಕಾರವನ್ನು ಮಾಡಲಾಗುತ್ತಿದೆ. ಮುಂಭಾಗದಲ್ಲಿ ಹುಲ್ಲುಹಾಸು ನೆಟ್ಟು ಬೆಳೆಸಲಾಗುತ್ತಿದೆ. ಸಂತೆಕಡೂರಿನಿಂದ ಕಾಚಿನಕಟ್ಟೆವರೆಗೆ ನರಸಿಂಹರಾಜಪುರ ರಸ್ತೆಗೆ ಹೊಸ ಡಾಂಬರ್ ಹಾಕಲಾಗಿದೆ. ರಸ್ತೆ ವಿಜಕದಲ್ಲಿ ಬೆಳೆದ ಗಿಡಗಂಟಿಗಳನ್ನು ತೆರವುಗೊಳಿಸಿ, ರಸ್ತೆ ಬದಿಯಲ್ಲಿ ನಿಂತ ಮಣ್ಣು ತೆಗೆದು, ಗುಡಿಸಿ ಒಪ್ಪ ಓರಣ ಮಾಡಲಾಗುತ್ತಿದೆ.
ವಾಹನ ನಿಲುಗಡೆಯೇ ಸವಾಲು;
ಜಿಲ್ಲೆಯ ನಾನಾ ಭಾಗಗಳಿಂದ ಜನರನ್ನು ಕರೆತರಲು 2 ಸಾವಿರಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 1700 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ. ಇವುಗಳಲ್ಲದೆ ಸಾವಿರಾರು ಕಾರು, ವ್ಯಾನ್, ಮ್ಯಾಕ್ಸಿ ಕ್ಯಾಬ್‌ಗಳೂ ಬರುವ ಸಾಧ್ಯತೆ ಇದೆ. ಈ ಎಲ್ಲಾ ವಾಹನಗಳಿಗೆ ನಿಲುಗಡೆ ವ್ಯವಸ್ಥೆ ಮಾಡುವುದು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿದೆ. ಹೀಗಾಗಿ ನರಸಿಂಹರಾಜಪುರ ರಸ್ತೆಯಲ್ಲಿಸಂತೆಕಡೂರಿನಿಂದ ಅಮೃತ್ತೂರು ವರೆಗೆ ಕಾಲಿ ಬಡಾವಣೆಗಳು, ಹೊಲ ಮತ್ತು ತೋಟಗಳನ್ನು ವಾಹನಗಳ ನಿಲುಗಡೆಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲಿಗೆ ವಾಹನಗಳ ಪ್ರವೇಶ ಸರಾಗವಾಗಲು ರಸ್ತೆ ವಿಭಜಕವನ್ನು ತೆರವುಗೊಳಿಸಲಾಗಿದೆ. ವಾಹನಗಳ ನಿಯಂತ್ರಣಕ್ಕಾಗಿ ಪ್ರತಿಯೊಂದು ತಿರುವುಗಳಲ್ಲು ಐದಾರು ಬ್ಯಾರಿಕೇಡ್‌ಗಳನ್ನು ಇಡಲಾಗಿದೆ.
ಮೋದಿ ಆಗಮನ ಹಿನ್ನೆಲೆ ಹೆಚ್ಚಿದ ಭದ್ರತೆ ;
ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯನ್ನು ರಾಜ್ಯ ಕೈಗಾರಿಕಾ ಭದ್ರತಾ ಪಡೆ(ಕೆಎಸ್‌ಐಎಸ್‌ಎಫ್)ಗೆ ವಹಿಸಿದ ಬಳಿಕ ಯಾರನ್ನೂ ನಿಲ್ದಾಣದ ಒಳಗೆ ಬಿಡುತ್ತಿಲ್ಲ. ನಿಲ್ದಾಣದ ಅಧಿಕೃತ ಸಿಬ್ಬಂದಿ, ವೇದಿಕೆ ಮತ್ತು ಪೆಂಡಾಲ್ ನಿರ್ಮಾಣ ಮಾಡುವವರನ್ನು ಹೊರತುಪಡಿಸಿ ಯಾರೂ ಒಳ ಹೋಗದಂತೆ ತಡೆಯಲಾಗುತ್ತಿದೆ. ಎಸ್‌ಪಿಜಿ ಅಧಿಕಾರಿಗಳು ಗುರುವಾರದಿಂದ ನಿಲ್ದಾಣವನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವುದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನರಸಿಂಹರಾಜಪುರ ರಸ್ತೆಯನ್ನು ದುರಸ್ತಿ ಮತ್ತು ಸ್ವಚ್ಛತಾ ಕಾರ್ಯ ಒಂದು ವಾರದಿಂದ ನಡೆಯುತ್ತಿದ್ದು, ವಿಮಾನ ನಿಲ್ದಾಣ ಮುಖ್ಯದ್ವಾರದಲ್ಲಿ ಹುಲ್ಲು ಹಾಸು ಬೆಳೆಸಲಾಗುತ್ತಿದೆ.
The airport in Shivamogga will boost commerce, connectivity and enhance tourism. https://t.co/6yT84zpBaC
— Narendra Modi (@narendramodi) February 24, 2023
Prime Minister Narendra Modi will inaugurate Shivamogga airport, the dream project of former Karnataka Chief Minister and BJP Central Committee Member BS Yediyurappa, on February 27.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm