ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am