ಬ್ರೇಕಿಂಗ್ ನ್ಯೂಸ್
27-02-23 04:30 pm HK News Desk ಕರ್ನಾಟಕ
ಶಿವಮೊಗ್ಗ, ಫೆ.27: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಹುದಿನಗಳ ಕನಸು ಕೊನೆಗೂ ನನಸಾಗಿದೆ. ಯಡಿಯೂರಪ್ಪ ಜನ್ಮ ದಿನದಂದೇ ಕರ್ನಾಟಕದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅರ್ಪಿಸಿದ್ದಾರೆ.
ಸೋಗಾನೆಯಲ್ಲಿ ಮಲೆನಾಡಿಗೊಂದು ವಿಮಾನ ನಿಲ್ದಾಣ ಮಾಡಬೇಕೆಂಬುದು ಯಡಿಯೂರಪ್ಪ ಕನಸಾಗಿತ್ತು. 2008 ಜೂನ್ 20ರಂದು ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರೇ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಹತ್ತು ವರ್ಷಗಳ ಬಳಿಕ 2018ರ ವೇಳೆಗೆ ನಿಲ್ದಾಣದ ಕಾಮಗಾರಿಗೆ ವೇಗ ಸಿಕ್ಕಿತ್ತು. ಇದೀಗ ಅವರ ಜನ್ಮದಿನದಂದೇ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸುವ ಮೂಲಕ ಅಪರೂಪದ ಗಿಫ್ಟ್ ಕೊಟ್ಟಿದ್ದಾರೆ.
ಮಲೆನಾಡಿನ ಹಸಿರಿನ ಮಡಿಲಿನ ಮಧ್ಯೆ ಬರೋಬ್ಬರಿ 775 ಎಕರೆ ಪ್ರದೇಶದಲ್ಲಿ ನಿಲ್ದಾಣ ಆವರಿಸಿಕೊಂಡಿದ್ದು 3.2 ಕಿಮೀ ಉದ್ದಕ್ಕೆ ರನ್ ವೇ ಮಾಡಲಾಗಿದೆ. 450 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ರಾಜ್ಯದ ಬೆಂಗಳೂರು ಬಿಟ್ಟರೆ ಅತಿದೊಡ್ಡ ವಿಮಾನ ನಿಲ್ದಾಣ ಎನ್ನುವ ಹೆಗ್ಗಳಿಗೆ ಪಾತ್ರವಾಗಿದೆ. ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ಈ ದಿನ ಬಹಳ ಅಪರೂಪದ ಮತ್ತು ವೈಶಿಷ್ಟ್ಯಪೂರ್ಣವಾದದ್ದು. ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ದಿನ. ಇಡೀ ವಿಶ್ವವೇ ಕೊಂಡಾಡುತ್ತಿರುವ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಿದ್ದು ನಮ್ಮೆಲ್ಲರ ಭಾಗ್ಯ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.
ಆಬಳಿಕ, ಕನ್ನಡದಲ್ಲೇ ಭಾಷಣ ಆರಂಭಿಸಿದ ನರೇಂದ್ರ ಮೋದಿ, ಸಿರಿಗನ್ನಂಡಂ ಗೆಲ್ಗೆ ಸಿರಿ ಕನ್ನಡಂ ಬಾಳ್ಗೆ, ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂದು ಹೇಳುವ ಮೂಲಕ ರಾಷ್ಟ್ರ ಕವಿ ಕುವೆಂಪು ಅವರನ್ನು ನೆನಪಿಸಿಕೊಂಡರು. ಹಿಂದೆಲ್ಲ ದೊಡ್ಡ ನಗರಗಳಲ್ಲಿ ಮಾತ್ರ ವಿಮಾನ ನಿಲ್ದಾಣ ಇತ್ತು. ಇವತ್ತು ಹಳ್ಳಿಗೂ ವಿಮಾನಗಳು ಕಾಲಿಡುತ್ತಿದ್ದು ಇದು ಅಭಿವೃದ್ಧಿಯ ಸಂಕೇತ. ಭಾರತದತ್ತ ಇಡೀ ಜಗತ್ತು ತಿರುಗಿ ನೋಡುತ್ತಿದೆ. ಗ್ರಾಮೀಣ ಹಾಗೂ ಸಣ್ಣ ನಗರಗಳು ಅಭಿವೃದ್ದಿಗೊಳ್ಳುತ್ತಿವೆ. ದೇಶದಲ್ಲಿ 74 ಏರ್‌ಪೋರ್ಟ್‌ಗಳನ್ನು ಹೊಸತಾಗಿ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದ ಶುಭಾಶಯ ಸಲ್ಲಿಸಿದ ಪ್ರಧಾನಿ ಮೋದಿ, ಅವರ ಜೀವನ ಬಡವರ ಹಾಗೂ ರೈತರ ಕಲ್ಯಾಣಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದರಲ್ಲದೆ, ನೆರೆದ ಜನರಿಗೆ ಮೊಬೈಲ್ ಫೋನ್ ಫ್ಲಾಶ್ ಓಪನ್ ಮಾಡಿ ಬಿಎಸ್‌ವೈಗೆ ಶುಭಕೋರುವಂತೆ ಎಂದು ಮನವಿ ಮಾಡಿದರು. ಅದರಂತೆ ನೆರೆದಿದ್ದ ಜನರು ಮೊಬೈಲ್ ಫೋನ್ ಫ್ಲಾಶ್ ಹಾಕಿ ಶುಭಕೋರಿದರು.
PM Narendra Modi has inaugurated the Shivmogga Airport in Karnataka and it will cater to the people of central Karnataka with improved air connectivity. Built at a cost of Rs 450 crore, the airport’s operation will help in the region's growth in various sectors, like tourism, IT industry establishment and more.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm