ಬ್ರೇಕಿಂಗ್ ನ್ಯೂಸ್
01-03-23 02:29 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1 : ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರು ಕೈಗೊಂಡಿದ್ದ ಮುಷ್ಕರ ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಹಣಕಾಸು ಇಲಾಖೆಯ ಮೂಲಕ ಆದೇಶ ಹೊರಡಿಸಿದ್ದಾರೆ. ತುರ್ತಾಗಿ 17 ಶೇ.ದಷ್ಟು ವೇತನ ಹೆಚ್ಚಿಸಲ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಈ ಕುರಿತು ಹೇಳಿಕೆ ನೀಡಿದ್ದಾರೆ.
ಈಗಾಗಲೇ ಏಳನೇ ವೇತನ ಆಯೋಗವನ್ನು ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆ ನಡೆಸಲಾಗುವುದು. ಈಗ ಮಧ್ಯಂತರ ಪರಿಹಾರ ಘೋಷಿಸಲು ನಿರ್ಧರಿಸಲಾಗಿದೆ ಎಂದರು. ಹಳೆಯ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ನೌಕರರ ಸಂಘ ಮುಂದಿಟ್ಟಿತ್ತು. ಈ ಬಗ್ಗೆ ಅಧ್ಯಯನಕ್ಕಾಗಿ ಹಣಕಾಸು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಪಿಂಚಣಿ ಪದ್ಧತಿ ಕುರಿತು ಸಮಿತಿ ವರದಿ ನೀಡಲಿದೆ ಎಂದು ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಜೊತೆಗಿನ ಸಭೆಯ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ವಿವಿಧ ಸಂಘಟನೆಗಳ ಪ್ರಮುಖರ ಜೊತೆಗೆ ಮಾತುಕತೆ ನಡೆಸಿ ಮುಷ್ಕರ ಅಂತ್ಯಗೊಳಿಸುವ ಘೋಷಣೆ ಮಾಡಿದರು. ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮತ್ತು ಎನ್ಪಿಎಸ್ ಮರು ಜಾರಿ ಕುರಿತು ಅಧ್ಯಯನಕ್ಕೆ ಸಮಿತಿ ನೇಮಿಸುವ ತೀರ್ಮಾನವನ್ನು ಒಪ್ಪಿಕೊಂಡು ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ’ ಎಂದರು. ಶೇಕಡ 40ರಷ್ಟು ವೇತನ ಹೆಚ್ಚಳ ಸೇರಿದಂತೆ ಎಲ್ಲ ಬೇಡಿಕೆಗಳು ಈಡೇರಬೇಕು. ಈಗ ತಾತ್ಕಾಲಿಕವಾಗಿ ಮುಷ್ಕರ ಸ್ಥಗಿತವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು
On the day the state government employees embarked on their indefinite strike to demand implementation of the 7th Pay Commission interim report and switching back to the Old Pension Scheme, Chief Minister Basavaraj Bommai on Wednesday announced a 17 per cent interim wage relief for the employees. Speaking to reporters, the CM said, “We have held discussions with officials of the Finance Department. We also held discussions with representatives of the various state government employees’ unions and we have come to an agreement.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm