ಬ್ರೇಕಿಂಗ್ ನ್ಯೂಸ್
02-03-23 06:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.2: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸಲು ಶಿಕ್ಷಣ ಇಲಾಖೆ ನಿರಾಕರಿಸಿದೆ. ಈ ಕುರಿತ ಮನವಿಯನ್ನು ಪರಿಗಣಿಸದಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚಿಸಿದ್ದಾರೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಮತ್ತು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಶ್, ಹಿಜಾಬ್ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ಪರೀಕ್ಷೆ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಹಿಜಾಬ್ ಕಾರಣಕ್ಕೆ ಯಾವುದೇ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗುತ್ತಾರೆ ಎಂದು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ರಾಜ್ಯ ಹೈಕೋರ್ಟ್ ಕಳೆದ ವರ್ಷ ಮಾರ್ಚ್‌ನಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ವಿದ್ಯಾರ್ಥಿಗಳು ಆಯಾ ಕಾಲೇಜು ಆಡಳಿತ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು 2022ರ ಫೆ.5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರಿಂದ ಹಿಜಾಬ್ ಪರ ಹೋರಾಟಗಾರರಿಗೆ ಹಿನ್ನಡೆಯಾಗಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು ಸದ್ಯ ವಿಚಾರಣೆ ಹಂತದಲ್ಲಿದೆ. ಈ ನಡುವೆ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಆ ಕುರಿತ ತೀರ್ಪು ಇನ್ನೂ ಬಂದಿಲ್ಲ. ಇದೇ ಮಾರ್ಚ್ 10ರಿಂದ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
Karnataka education board denies Writing exams with hijab Muslim Students
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm