ಬ್ರೇಕಿಂಗ್ ನ್ಯೂಸ್
03-03-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ? ಎಂದು ರಾಜ್ಯ ಬಿಜೆಪಿಯನ್ನು ಕರ್ನಾಟಕ ಕಾಂಗ್ರೆಸ್ ತೀವ್ರವಾಗಿ ಅಣಕಿಸಿದೆ.
ಲಂಚ ಪ್ರಕರಣದಲ್ಲಿ ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಶಾಸಕ ಮಾಡಾಳು ಮನೆಗಳಿಗೆ ದಾಳಿ ನಡೆಸಿದ್ದಾರೆ. ಈ ಕುರಿತು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
ಕಮಿಷನ್ ಲೂಟಿಗೆ ದಾಖಲೆ ಕೇಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ. ಈಗ ಕಮಿಷನ್ ಆರೋಪ ಒಪ್ಪುವಿರಾ? ಚುನಾವಣೆ ಖರ್ಚಿಗಾಗಿ ಬಿಜೆಪಿಯ #Election Collection ಬಿರುಸಿನಿಂದ ಸಾಗಿದೆ, ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ ದೋಚಿ ಬಾಚುತ್ತಿದೆ ಎಂದು ಆರೋಪಿಸಿದೆ.

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು? ಈ ಹಣ #PayCMಗೆ ತಲುಪಿಸುವುದಕ್ಕಾ ಅಥವಾ #PayPMಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ? ಎಂದು ಪ್ರಶ್ನಿಸಿದೆ.

"ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಭಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು #ElectionCollection ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಪ್ರಶ್ನೆನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಭಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು #Election Collection ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಪ್ರಶ್ನೆ ಮಾಡಿದೆ.
ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!
— Karnataka Congress (@INCKarnataka) March 3, 2023
ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?
ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?
ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ @BJP4Karnataka?#ElectionCollection pic.twitter.com/y3TdEMEWyo
The case of KAS officer Madalu Prashanth, son of BJP MLA Madalu Virupakshappa, who was caught accepting a bribe, has slipped out of the hands of the Congress. In a series of tweets, the Congress said, "Basavaraj Bommai, who used to say give documents to 40% commission, today in the Lokayukta raid, got the record for the commission's karmakanda. Isn't this a testimony to the cosmic corruption? Will you take responsibility for corruption and resign now? What else do you need to say that you are a 40% government, the BJP?"
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm