ಮಾರ್ಚ್ 9ರಿಂದ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್ಸಾರ್ಟಿಸಿ ವ್ಯವಸ್ಥೆ 

03-03-23 09:10 pm       Bangalore Correspondent   ಕರ್ನಾಟಕ

ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿ‌ನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ವ್ಯವಸ್ಥೆ ಮಾಡಿದೆ. 

ಬೆಂಗಳೂರು, ಮಾ.3 : ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿ‌ನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ವ್ಯವಸ್ಥೆ ಮಾಡಿದೆ. 

ಇದಕ್ಕೆ ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ಸಾರ್ಟಿಸಿ ನಿಯಮಕ್ಕೆ ಪತ್ರ ಮೂಲಕ ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್​ಆರ್​ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದಿರುಗುವಾಗ 'ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲು ಕೆಎಸ್​ಆರ್​ಟಿಸಿ ನಿಗಮ ಸೂಚಿಸಿದೆ. ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್​ಆರ್​ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.

2nd puc exam students can travel free in ksrtc bus to exam venue by showing halt ticket.