ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm