ಹೈಕೋರ್ಟ್ ಅಂಗಳ ತಲುಪಿದ ಶಾಸಕ ಮಾಡಾಳ್ ಭವಿಷ್ಯ ; ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ;  ವಿಮಾನ ನಿಲ್ದಾಣಗಳಿಗೆ ಲೋಕಾಯುಕ್ತಾ ಅಲರ್ಟ್ 

06-03-23 07:39 pm       Bangalore Correspondent   ಕರ್ನಾಟಕ

ಬಂಧನ ಭೀತಿಯಲ್ಲಿರುವ ಕೆಎಸ್‌ಡಿಎಲ್‌ನ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು, ಮಾ 06 : ಬಂಧನ ಭೀತಿಯಲ್ಲಿರುವ ಕೆಎಸ್‌ಡಿಎಲ್‌ನ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬಂಧನ ಭೀತಿಯಲ್ಲಿರುವ ವಿರೂಪಾಕ್ಷಪ್ಪ ಸಲ್ಲಿಸಿರುವ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲರು ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠದ ಮುಂದೆ ಸೋಮವಾರ ಬೆಳಗ್ಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಮಂಗಳವಾರ ವಿಚಾರಣೆಗೆ ನಿಗದಿ ಮಾಡುವುದಾಗಿ ತಿಳಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ? 

ಕೆಎಸ್‌ಡಿಎಲ್‌ನ ಗುತ್ತಿಗೆಗೂ ಲಂಚ ಸ್ವೀಕರಿಸಿರುವವರಿಗೂ ಸಂಬಂಧ ಇಲ್ಲ. ಅಲ್ಲದೆ, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆದರೂ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ, ಲೊಕಾಯುಕ್ತ ಪೊಲೀಸರು ಬಂಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಹಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನೋಟಿಸ್​ ನೀಡಲು ಲೋಕಾಯುಕ್ತ ಸಿದ್ಧತೆ: ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕಾರ ಹಾಗೂ ಬಂಧನ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ನೋಟಿಸ್ ನೀಡಲು ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮಗನ ಬಂಧನದ ಬಳಿಕ ನೈತಿಕ‌ ಹೊಣೆ ಹೊತ್ತು ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ವಿರೂಪಾಕ್ಷಪ್ಪ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದರಿಂದ ವಿಚಾರಣೆಗೆ ಹಾಜರಾಗುವಂತೆ ಸಿಆರ್​ಪಿಸಿ 41(a) ಅಡಿ ನೋಟಿಸ್ ನೀಡಲು ಸಿದ್ಧರಾಗಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಈ ಬೆಳವಣಿಗೆಗಳ ನಡುವೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಶಾಸಕ ವಿರೂಪಾಕ್ಷಪ್ಪ ಮಾಡಾಳ್​ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

Karnataka High Court Upholds Single Judge Order Against State's Decision  Permitting Only Muslim Priest To Perform Rituals At Datta Peeta

ವಿರೂಪಾಕ್ಷಪ್ಪ ಅವರು ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿಎಲ್ಲಾ ವಿಮಾನ ನಿಲ್ದಾಣಗಳಿಗೆ ಅವರ ಬಗ್ಗೆ ಮಾಹಿತಿ ರವಾನಿಸಲು ತೀರ್ಮಾನಿಸಿದ್ದಾರೆ.

ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದರೆ ಆರೋಪಿಯು ನ್ಯಾಯಾಲಯ ಅಥವಾ ಪೊಲೀಸರ ಪೂರ್ವಾನುಮತಿ ಇಲ್ಲದೆ ದೇಶ ತೊರೆಯುವಂತಿಲ್ಲ. ವಿದೇಶಕ್ಕೆ ಹೋಗುವ ಅನಿವಾರ್ಯತೆ ಇದ್ದರೆ ಆ ಬಗ್ಗೆ ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಬಂಧನವಾಗಿ 5 ದಿನ ಕಳೆದಿವೆ. ಆದರೂ ವಿರೂಪಾಕ್ಷಪ್ಪ ಅವರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ.

Decade-old cases await clearance by Karnataka Lokayukta | Deccan Herald

ವಿರೂಪಾಕ್ಷಪ್ಪ ಅವರ ಬಂಧನಕ್ಕೆ ಒತ್ತಡ ಹೆಚ್ಚಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್‌ ಜಾರಿ ಮಾಡಲು ಮುಂದಾಗಿದ್ದಾರೆ. ಬೆಂಗಳೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿರುವ ವಿರೂಪಾಕ್ಷಪ್ಪ ಅವರ ನಿವಾಸ, ರಾಜ್ಯ ಸಾಬೂನು ಹಾಗೂ ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಕಚೇರಿ, ಶಾಸಕರ ಭವನದ ಕೊಠಡಿಗೆ ನೋಟಿಸ್‌ನ ಪ್ರತಿ ಕಳುಹಿಸಲಾಗುತ್ತದೆ.

ವಿರೂಪಾಕ್ಷಪ್ಪ ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ್‌ ಮಾಡಾಳ್‌ ಅವರಿಗೆ ಸೇರಿದ 2 ಕಂಪನಿಗಳ ಬ್ಯಾಂಕ್‌ ಖಾತೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ದಿನವೇ ಮಾರ್ಚ್ 2ರಂದು ಸುಮಾರು 94 ಲಕ್ಷ ರೂ. ವರ್ಗಾವಣೆ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ. ಸಿದ್ದಲಿಂಗೇಶ್ವರ ಮತ್ತು ಸಣ್ಣಗೌಡರ್‌ ಬ್ರದರ್ಸ್‌ ಕಂಪನಿಗಳ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದೆ. ಮಲ್ಲಿಕಾರ್ಜುನ್‌, ಈ ಎರಡೂ ಕಂಪನಿಗಳ ಪಾಲುದಾರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಣಕ್ಕೆ ಸಂಬಂಧಪಟ್ಟಂತೆ ದಾಖಲೆ ಪತ್ರಗಳ ಸಮೇತ ಸೋಮವಾರ (ಮಾರ್ಚ್ 6) ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಮಲ್ಲಿಕಾರ್ಜುನ್‌ ಅವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

BJP MLA Virupakshappa moves High Court seeks anticipatory bail, Lokayukta alerts airports in india. Karnataka BJP MLA Madal Virupakshappa on Monday moved bail petition in the High Court seeking relief from the arrest in connection with the Lokayukta trap case.