ಬ್ರೇಕಿಂಗ್ ನ್ಯೂಸ್
07-03-23 06:46 pm HK News Desk ಕರ್ನಾಟಕ
ದಾವಣಗೆರೆ, ಮಾ 7: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರು ಆರು ದಿನಗಳ ನಂತರ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸಕ್ಕೆ ವಾಪಸ್ ಆಗಿದ್ದು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ದಾರೆ. ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ನಂತರ ವಿರೂಪಾಕ್ಷಪ್ಪ ಅವರು ಮಹದೇವಮ್ಮ ದೇವಿ ದರ್ಶನ ಪಡೆದರು. ಬಳಿಕ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಂಬಲಿಗರು ಮಾಡಾಳ್ ವಿರೂಪಾಕ್ಷಪ್ಪ ಪರ ಘೋಷಣೆ ಕೂಗಿದರು. ಅಲ್ಲದೇ ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ.
ಮೆರವಣಿಗೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಡಾಳ್ ವಿರೂಪಾಕ್ಷಪ್ಪ, ನಾನು ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಎಲ್ಲಾ ಹಣಕ್ಕೂ ನಮ್ಮ ಬಳಿ ಸೂಕ್ತ ದಾಖಲೆ ಇದೆ. ಆ ಹಣವನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.
ನನ್ನ ವಿರುದ್ಧ ಯಾರೋ ಷಡ್ಯಂತ್ರ ನಡೆಸಿದ್ದಾರೆ. ಒಂದು ಆಡಳಿತ ಪಕ್ಷದ ಶಾಸಕರ ಮೇಲೆ ದಾಳಿ ನಡೆದಿದ್ದು ಇತಿಹಾಸದಲ್ಲೇ ಮೊದಲು ಎಂದು ಮಾಡಾಳ್ ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.
ಅಡಕೆ ತೋಟ, ಕ್ರಷರ್ನಿಂದ ಬಂದ ಹಣ’ ;
ಅಡಕೆ ತೋಟ, ಕ್ರಷರ್ನಿಂದ ಬಂದ ಹಣವನ್ನು ಮನೆಯಲ್ಲಿಟ್ಟಿದ್ದೆವು. ಲೋಕಾಯುಕ್ತ ದಾಳಿ ವೇಳೆ ಈ ಹಣ ಅವರಿಗೆ ಸಿಕ್ಕಿದೆ. ಅದನ್ನು ಅವರು ವಶಕ್ಕೆ ಪಡೆದಿದ್ದಾರೆ. ಆ ಹಣಕ್ಕೆ ನಮ್ಮ ಬಳಿ ದಾಖಲೆಯಿದೆ. ಸೂಕ್ತ ದಾಖಲೆಗಳನ್ನು ನೀಡಿ ಮತ್ತೆ ಪಡೆದುಕೊಳ್ಳುತ್ತೇವೆ. ಕೆಎಸ್‌ಡಿಎಲ್ ಅಧ್ಯಕ್ಷನಾಗಿ ನಿಯಮಬಾಹಿರ ಕೆಲಸ ಮಾಡಿಲ್ಲ. ಪಕ್ಷ ತಾಯಿಯಿದ್ದಂತೆ, ಪಕ್ಷಕ್ಕೆ ಎಂದೂ ದ್ರೋಹ ಮಾಡುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಷ್ಪಕ್ಷಪಾತ ತನಿಖೆ ಮಾಡುವುದಾಗಿ ಹೇಳಿದ್ದಾರೆ. 48 ಗಂಟೆಯೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗುತ್ತೇನೆ ಎಂದು ಚನ್ನೇಶಪುರದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.
ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ ಎಂದು ಮಾಡಾಳ್ ಹೇಳಿದರು. ಲೋಕಾಯುಕ್ತಕ್ಕೆ ದೂರು ನೀಡಿದ್ದ ಶ್ರೇಯಸ್ ಕಶ್ಯಪ್ ಹೆಸರೇ ಗೊತ್ತಿಲ್ಲ. ನಿಮ್ಮ ಬಾಯಲ್ಲೇ ಮೊದಲ ಬಾರಿಗೆ ಅವನ ಹೆಸರು ಕೇಳುತ್ತಿದ್ದೇನೆ. ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿರುವ ಹಣ ನಮ್ಮದು. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಅವರು ಹೇಳಿದರು.
ಯಾರೋ ಹಣ ತಂದು ಕಚೇರಿಯಲ್ಲಿಟ್ಟರು ;
ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಹಿಡಿದು ಹಣದ ಮೇಲಿರಿಸಿ ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನ್ನು ನಾನು ಗಮನಿಸಿದ್ದೇನೆ. ಯಾರೋ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡುವೆ ಎಂದು ಅವರು ಹೇಳಿದ್ದಾರೆ.
#WATCH | Davanagere, Karnataka: Channagiri MLA Madal Virupakshappa was welcomed by BJP workers as he was granted interim anticipatory bail by Karnataka HC.
— ANI (@ANI) March 7, 2023
He was absconding for 5 days after his son was arrested along with 4 others while taking a bribe of Rs 40 lakhs. pic.twitter.com/loL3MI8n71
Bharatiya Janata Party (BJP) workers on Tuesday celebrated Karnataka high court's decision to grant interim anticipatory bail to Channagiri MLA Madal Virupakshappa - who is the main accused in the Karnataka Soaps and Detergents (KSDL) contract scam. Virupakshappa was absconding since the last five days after his son Prashant Madal was arrested in a bribery case.
13-11-24 12:37 pm
HK News Desk
White rumped vulture, Karwar: ಕಾರವಾರದಲ್ಲಿ ಆತಂ...
12-11-24 10:31 pm
Zammer Vs HD Kumaraswamy: ಕರಿಯಣ್ಣ ಹೇಳಿಕೆಯಿಂದ...
12-11-24 09:53 pm
ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿ...
12-11-24 03:51 pm
Lokayukta Raid: ಬೆಳಗಾವಿ, ಮೈಸೂರು ಸೇರಿ ರಾಜ್ಯದಲ್...
12-11-24 03:12 pm
12-11-24 09:00 pm
HK News Desk
ಬಾಂಗ್ಲಾ ಅಲ್ ಖೈದಾ ಟೆರರ್ ಫಂಡಿಂಗ್ ; ಕರ್ನಾಟಕ, ಬಿ...
12-11-24 12:35 pm
ಬಾಬಾ ಸಿದ್ದಿಕಿಯನ್ನು ಕೊಲೆಗೈದು ತಲೆಮರೆಸಿದ್ದ ಬಿಷ್ಣ...
11-11-24 05:19 pm
ತಮಿಳು ಚಿತ್ರರಂಗಕ್ಕೆ ಬಿಗ್ ಶಾಕ್ ; 400ಕ್ಕೂ ಹೆಚ್...
10-11-24 04:09 pm
ದೇಶದಲ್ಲಿ ಬಿಜೆಪಿ ಇರೋ ವರೆಗೂ ಧರ್ಮಾಧರಿತ ಮೀಸಲಾತಿ...
10-11-24 11:33 am
12-11-24 07:00 pm
Mangalore Correspondent
Mangalore, Kadaba Accident, Volkswagen Virtus...
12-11-24 12:22 pm
Udupi Lockup death: ಬ್ರಹ್ಮಾವರ ಠಾಣೆಯಲ್ಲಿ ಲಾಕಪ್...
11-11-24 11:03 pm
Mangalore Mulki Murder, Crime, Arrest: ಪತ್ನಿ,...
11-11-24 10:23 pm
SCDCC Bank Mangalore, Rajendra Kumar: ನ.16ರಂದ...
11-11-24 09:05 pm
12-11-24 07:02 pm
Mangalore Correspondent
Mangalore crime, Bajarang Dal, Ullal News: ಉಳ...
12-11-24 11:41 am
Udupi police, lock up death, Crime: ಬ್ರಹ್ಮಾವರ...
11-11-24 12:16 pm
Mangalore crime, Bengare, Assult: ಹುಡುಗಿ ನೋಡ...
10-11-24 10:53 pm
Mulki Murder, Mangalore Crime, Pakshikere: ಪಕ...
10-11-24 06:57 pm