ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm