ಅಂತಾರಾಷ್ಟ್ರೀಯ ಮಹಿಳಾ ದಿನ ಸಂಭ್ರಮ ; ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆಗೆ ಚಾಲನೆ, 10 ಸಾವಿರ ಸ್ವಸಹಾಯ ಸಂಘಗಳಿಗೆ 100 ಕೋಟಿ ರೂ. ಬಿಡುಗಡೆ 

08-03-23 09:53 pm       Bangalore Correspondent   ಕರ್ನಾಟಕ

ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ.

ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

Women's day: ಅಂತಾರಾಷ್ಟ್ರೀಯ ಮಹಿಳಾ ದಿನ ಸಂಭ್ರಮ; ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ  ಯೋಜನೆಗೆ ಚಾಲನೆ | International Women's Day; CM Basavaraj Bommai Launches new  Scheme - Kannada Oneindia

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9‌ ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

International womens day CM Basavaraj Bommai launches new scheme.