ಬ್ರೇಕಿಂಗ್ ನ್ಯೂಸ್
09-03-23 04:51 pm HK News Desk ಕರ್ನಾಟಕ
ಯಾದಗಿರಿ, ಮಾ.9: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣ ನಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಬೇಸರ ವ್ಯಕ್ತಪಡಿಸಿದ್ದಾರೆ.
ಯಾದಗಿರಿಯ ಶಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡ್ತಿದೆ. ಯಾರನ್ನೂ ರಕ್ಷಿಸುವ ಅಥವಾ ಟಾರ್ಗೆಟ್ ಮಾಡೋ ಕೆಲಸ ಮಾಡಲ್ಲ. ಇದೇ ಪರಿಸ್ಥಿತಿ ಕಾಂಗ್ರೆಸ್ ಶಾಸಕರಿಗೆ ಆಗಿದ್ದರೆ ಇ.ಡಿ, ಐಟಿ, ಸಿಬಿಐ ಆಯ್ತು ಈಗ ಲೋಕಾಯುಕ್ತಗೂ ಛೂ ಬಿಟ್ಟಿದ್ದಾರೆ ಅಂತಿದ್ರು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸ್ತಾರೆ ಎಂದು ಹೇಳಿದ್ದಾರೆ.

ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್- ಕಾಂಗ್ರೆಸ್ ಶಾಸಕರ ನಡೆಗೆ ತೀವ್ರ ಆಕ್ರೋಶ ;
ಅಭಿವೃದ್ಧಿ ಕಾರ್ಯದಿಂದ ಮತ ಕೇಳುವ ಬದಲು ಕುಕ್ಕರ್ ನೀಡಿ ಮತ ಕೇಳುತ್ತಿರುವ ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧ ಮತದಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಶೃಂಗೇರಿ ಶಾಸಕ ಹಾಗೂ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಕ್ಷೇತ್ರದಾದ್ಯಂತ ಕುಕ್ಕರ್ ರಾಜಕೀಯ ಆರಂಭಿಸಿದ್ದಾರೆ. ಕೇತ್ರದಾದ್ಯಂತ ಸುಮಾರು ಒಂದು ಲಕ್ಷಕ್ಕೂ ಅಧಿಕ ಕುಕ್ಕರ್ ವಿತರಣೆ ಮಾಡಿದ್ದು, ಜನಸಾಮಾನ್ಯರು ಈಗ ಕುಕ್ಕರ್ ನೀಡಿ ಮತ ಕೇಳುವುದಾದರೆ ಕಳೆದ ಐದು ವರ್ಷದಿಂದ ಮಾಡಿದ್ದೇನು ಎಂದು ಪ್ರಶ್ನಿಸಿದ್ದಾರೆ.
ಮಲೆನಾಡಿನ ಗಾಂಧಿ ಎಂದೇ ಹೆಸರಾಗಿದ್ದ ಗೋವಿಂದೇ ಗೌಡರ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಕುಕ್ಕರ್ ಆಮಿಷವೊಡ್ಡಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದರು. ಚುನಾವಣೆಯ ಹಿನ್ನೆಲೆ, ಕಾಂಗ್ರೆಸ್ ಮುಖಂಡ ಬೇಗಾರು ರಮೇಶ್ ನೇತೃತ್ವದಲ್ಲಿ ಟಿ.ಡಿ.ರಾಜೇಗೌಡರ ಭಾವಚಿತ್ರವುಳ್ಳ ಕುಕ್ಕರ್ ಅನ್ನು ಮನೆ-ಮನೆಗೆ ವಿತರಿಸಿ, ಅವರೊಂದಿಗೆ ಫೋಟೋ ಹೊಡೆಸಿಕೊಂಡಿದ್ದರು. ಹಾಲಿ ಶಾಸಕರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಮಗಳೂರಿನಲ್ಲಿ ಮೂರು ತಾಲೂಕು ಸೇರಿ ಶೃಂಗೇರಿ ವಿಧಾನಸಭಾ ಕ್ಷೇತ್ರವಾಗಿದೆ. ಮೂರೂ ತಾಲೂಕಿನಲ್ಲೂ ಕಳೆದ ಎರಡು ಮೂರು ವರ್ಷಗಳಿಂದ ಭಾರೀ ಮಳೆಗೆ ಜನ ಮನೆ-ಮಠ ಕಳೆದುಕೊಂಡಿದ್ದಾರೆ. ಹಲವರಿಗೆ ಇನ್ನೂ ಸೂಕ್ತ ರೀತಿಯಲ್ಲಿ ಪರಿಹಾರ ಬರಲಿಲ್ಲ. ಮಳೆಯಿಂದ ನಾಶಗೊಂಡಿದ್ದ ಮೂಲಭೂತ ಸೌಕರ್ಯಗಳು ಇಂದಿಗೂ ದುರಸ್ಥಿಗೊಂಡಿಲ್ಲ. ಈಗ ಚುನಾವಣೆ ಬಂತು ಎಂದು ಅಭಿವೃದ್ಧಿ ಕೆಲಸ ಬಿಟ್ಟು ಕುಕ್ಕರ್ ಕೊಟ್ಟು ಮತ ಕೇಳುತ್ತಿದ್ದಾರೆ ಎಂದು ಮತದಾರರು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದರು.
ಕುಕ್ಕರ್ ಬೇಡ. ನಮ್ಮ ಮನೆಯಲ್ಲಿಯೇ ಇದೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ ಅವುಗಳನ್ನು ಬಗೆಹರಿಸುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಎಂದು ಶಾಸಕರಿಗೆ ಜನರು ಸಲಹೆ ನೀಡಿದರು.
BJP leaders admit ’embarrassed’ over welcome to MLA facing Lokayukta case says CT Ravi. Soon after BJP MLA Madal Virupakshappa was granted anticipatory bail by the Karnataka High Court Tuesday in connection with a bribery case, his supporters took out a procession in his constituency. On Wednesday, they poured milk on a photograph of Virupakshappa at a temple in the Sulegere village, Davanagere district.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm