ಬಿಜೆಪಿ ಭದ್ರ ಮತಬ್ಯಾಂಕ್ ಲಿಂಗಾಯತರಿಗೆ ಕಾಂಗ್ರೆಸ್ ಗಾಳ ; ಸಮುದಾಯದ ಮುಖಂಡರನ್ನು ಸೆಳೆಯಲು 'ಬಿಗ್ ಆಪರೇಶನ್' 

11-03-23 11:00 pm       Bangalore Correspondent   ಕರ್ನಾಟಕ

ಬಿಜೆಪಿ ಪಾಲಿನ ಭದ್ರ ಮತಬ್ಯಾಂಕ್ ಎನಿಸಿಕೊಂಡಿದ್ದ ಲಿಂಗಾಯತ ಸಮುದಾಯದ ಮುಖಂಡರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ''ಆಪರೇಷನ್ ಲಿಂಗಾಯತ ಲೀಡರ್ಸ್'' ಆರಂಭಿಸಿದೆ.

ಬೆಂಗಳೂರು, ಮಾ.11 : ಬಿಜೆಪಿ ಪಾಲಿನ ಭದ್ರ ಮತಬ್ಯಾಂಕ್ ಎನಿಸಿಕೊಂಡಿದ್ದ ಲಿಂಗಾಯತ ಸಮುದಾಯದ ಮುಖಂಡರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ''ಆಪರೇಷನ್ ಲಿಂಗಾಯತ ಲೀಡರ್ಸ್'' ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಗುರುತಿಸಿಕೊಂಡಿರುವ ನಾಯಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೆಳೆಯತೊಡಗಿದೆ. 

BJP Appoints CM Bommai As Chairman Of Campaign Committee For Karnataka  Election

ಬಿಜೆಪಿಯಲ್ಲಿರುವ ಹಳೆ ಮೈಸೂರು ಭಾಗದ ಪ್ರಬಾವಿ ಲಿಂಗಾಯತ ಮುಖಂಡ ವಸತಿ ಸಚಿವ ವಿ. ಸೋಮಣ್ಣ, ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮೋಹನ್ ಲಿಂಬೆಕಾಯಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್​ನಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಶಾಸಕರು, ಮಾಜಿ ಶಾಸಕರು ಸೇರಿದಂತೆ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಸ್ಥಳೀಯ ಮಟ್ಟದ ನಾಯಕರಿಗೂ ಗಾಳ ಹಾಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. 

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕಾಂಗ್ರೆಸ್​ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಹಾಗು ಇನ್ನಿತರ ಮುಖಂಡರು ನಿರಂತರ ಕಸರತ್ತು ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಬೆಂಬಲಿಗರಾಗಿದ್ದ ಮಾಜಿ ಶಾಸಕ ಯು.ಬಿ ಬಣಕಾರ್, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಈ ಹಿಂದೆ ಕೆಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಿರಣ್ ಕುಮಾರ್, ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಪ್ತರಾಗಿದ್ದ ತಮ್ಮಯ್ಯ ಅವರನ್ನು ಆಪರೇಷನ್ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲಾಗಿದೆ. 

C T Ravi's 'Sarvajna' remark on SC judges triggers row | Deccan Herald

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿನಿಧಿಸುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ವಿ.ಎಸ್ ಪಾಟೀಲ್ ಅವರನ್ನು ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಶಾಕ್ ನೀಡಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ ಹೀಗೆ ಸ್ಥಳೀಯಾಡಳಿತ ಕ್ಷೇತ್ರಗಳಲ್ಲಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಸದಸ್ಯರಾಗಿದ್ದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಮುಖಂಡರನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೆಳೆದುಕೊಳ್ಳತೊಡಗಿದೆ. 

BS Yediyurappa resigns as Chief Minister of Karnataka; says 'no pressure  from BJP high command' - BusinessToday

ವೀರಶೈವ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಬಳಿಕ ಬಿಜೆಪಿ ಬಗ್ಗೆ ಬೇಸರಗೊಂಡಿರುವ ಲಿಂಗಾಯತರ ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಚುನಾವಣೆ ಹೊತ್ತಿಗೆ ರಾಜ್ಯದ ಉದ್ದಗಲದಲ್ಲಿ ಹೆಚ್ಚಿನ ವೀರಶೈವ ಲಿಂಗಾಯತ ಮುಖಂಡರನ್ನು ಪಕ್ಷಕ್ಕೆ ಕರೆತರುವ ಸಾಹಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಬಿಜೆಪಿ ಪಾಲಿಗೆ ಬಹುದೊಡ್ಡ ಶಾಕಿಂಗ್ ನಡೆ ಎನ್ನಬೇಕಷ್ಟೆ.

Determined to ensure it wins a majority in the upcoming elections, Congress is making big efforts to woo ‘winnable’ lawmakers from BJP and JD(S), including some of those who deserted the party in.