ಧಾರವಾಡದಲ್ಲಿ ದೇಶದ ಪ್ರಥಮ ಹಸಿರು ಐಐಟಿ ಕ್ಯಾಂಪಸ್, ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಉದ್ಘಾಟಿಸಿದ ಮೋದಿ 

12-03-23 07:26 pm       HK News Desk   ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ಧಾರವಾಡದಲ್ಲಿಂದು ನೂತನ ಐಐಟಿ ಕ್ಯಾಂಪಸ್ ಮತ್ತು ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು.

Photo credits : ANI news

ಧಾರವಾಡ, ಮಾ.11: ಪ್ರಧಾನಿ ನರೇಂದ್ರ ಮೋದಿ ಧಾರವಾಡದಲ್ಲಿಂದು ನೂತನ ಐಐಟಿ ಕ್ಯಾಂಪಸ್ ಮತ್ತು ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಪ್ರಧಾನಿ ಮೋದಿ, 9 ವರ್ಷದ ಅವಧಿಯಲ್ಲಿ ದೇಶದ ಹಲವೆಡೆ ಐಐಟಿ, ಐಐಎಂ ಸ್ಥಾಪಿಸಲಾಗಿದೆ.  2019ರ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದ್ದ ಐಐಟಿಯನ್ನು ಕೊರೋನಾ ಸಂಕಷ್ಟ ಕಳೆದ 4 ವರ್ಷಗಳ ನಂತರ ಉದ್ಘಾಟಿಸಲಾಗಿದೆ. ನೂತನ ಐಟಿಟಿ ಕ್ಯಾಂಪಸ್ ನಲ್ಲಿ ಉತ್ತಮ ಶಿಕ್ಷಣದ ಸೌಲಭ್ಯ ಇರಲಿದೆ. ಇದು ಉತ್ತಮ ಭವಿಷ್ಯಕ್ಕಾಗಿ ಯುವ ಮನಸ್ಸುಗಳನ್ನು ಪೋಷಿಸುತ್ತದೆ. ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯೂ ಗುಣಮಟ್ಟದ ಶಿಕ್ಷಣ  ಪಡೆಯಲು ಅವಕಾಶವನ್ನು ಪಡೆಯಬೇಕು ಎಂದ ಅವರು, ವಿಶ್ವಕ್ಕೆ ಭಾರತದ ಡಿಜಿಟಲ್ ತಾಕತ್ತು ಪ್ರದರ್ಶನವಾಗಿದೆ ಎಂದರು.

ಉತ್ತಮ, ಆಧುನಿಕ ಮೂಲಸೌಕರ್ಯ ಮತ್ತು ಆಧುನಿಕ ಮೂಲಸೌಕರ್ಯಗಳು ಜೀವನವನ್ನು ಸುಲಭಗೊಳಿಸುತ್ತದೆ ಮತ್ತು ನಮ್ಮ ಸಮಾಜದ ಪ್ರತಿಯೊಂದು ವರ್ಗಕ್ಕೂ ಅನುಕೂಲ ಮಾಡಿಕೊಡುತ್ತದೆ. ಜನರಿಗೆ ಉತ್ತಮ ರಸ್ತೆ, ಆರೋಗ್ಯ ನೀಡಲು ಆದ್ಯತೆ ನೀಡಲಾಗಿದೆ. ಹಳ್ಳಿಗಳಲ್ಲಿ ಪಿಎಂ ಸಡಕ್ ಯೋಜನೆ ಮೂಲಕ ರಸ್ತೆಗಳ ಅಭಿವೃದ್ಧಿಯಾಗಿದೆ. ಮೂಲ ಸೌಕರ್ಯ ಕ್ಷೇತ್ರಕ್ಕೆ ಆಧುನಿಕತೆಯ ಸ್ಪರ್ಶ ನೀಡಲಾಗಿದೆ. ಕನೆಕ್ಟಿವಿಟಿ  ವಿಚಾರದಲ್ಲಿ ಕರ್ನಾಟಕ ಮೈಲಿಗಲ್ಲು ಸ್ಥಾಪಿಸಿದೆ. ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣ ಪ್ರಪಂಚದ ಅತಿ ದೊಡ್ಡ ನಿಲ್ದಾಣವಾಗಿದೆ. ಇವೆಲ್ಲವೂ ಅಭಿವೃದ್ಧಿ ವಿಚಾರದಲ್ಲಿ ಹೊಸ ದಾಖಲೆಗಳಾಗಿವೆ. ಕರ್ನಾಟಕ ಹೈಟೆಕ್ ಇಂಡಿಯಾದ ಎಂಜಿನ್ ಎಂದು ಕೊಂಡಾಡಿದರು.

ಇಡೀ ಕರ್ನಾಟಕದಲ್ಲಿ ಜಯದೇವ ಆಸ್ಪತ್ರೆ ಬಗ್ಗೆ ಭರವಸೆಯಿದೆ.  ಬೆಂಗಳೂರು, ಮೈಸೂರು, ಕಲಬುರಗಿಯಲ್ಲಿದ್ದ ಆಸ್ಪತ್ರೆಯನ್ನು ಈಗ ಹುಬ್ಬಳ್ಳಿಯಲ್ಲಿಯೂ ಸ್ಥಾಪಿಸಲಾಗಿದೆ. ಕರ್ನಾಟಕದಲ್ಲಿ ಮೊದಲಿನಿಂದಲೂ ಆರೋಗ್ಯ ಕ್ಷೇತ್ರಕ್ಕೆ ಮಹತ್ವವಿದೆ. ಧಾರವಾಡ ಜಿಲ್ಲೆ ಕರ್ನಾಟಕ ಮತ್ತು ಭಾರತದ ಪ್ರತಿಬಿಂಬವಾಗಿದ್ದು,  ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ. ಅವಳಿ ನಗರದಲ್ಲಿ ಅಭಿವೃದ್ಧಿ ಪರ್ವ ನಡೆಯಲಿದೆ. ತುಪ್ಪರಿಹಳ್ಳ ಪ್ರವಾಹ ನಿಯಂತ್ರಣ ಕೇಂದ್ರ ಸ್ಥಾಪಿಸಿದ್ದೇವೆ.ಧಾರವಾಡದಲ್ಲಿ ಏಳು ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ರೇಣುಕಾಸಾಗರಿಂದ ನೀರು ತಂದು ಕೊಡುತ್ತಿದ್ದೇವೆ ಎಂದು ತಿಳಿಸಿದರು.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣವನ್ನು ಟೀಕಿಸಿದ ಮೋದಿ ಭಾರತವು ಕೇವಲ ಅತಿದೊಡ್ಡ ಪ್ರಜಾಪ್ರಭುತ್ವವಲ್ಲ, ಅದು ಪ್ರಜಾಪ್ರಭುತ್ವದ ತಾಯಿಯಾಗಿದೆ. ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ… ಕೆಲವರು ಭಾರತದ ಪ್ರಜಾಪ್ರಭುತ್ವವನ್ನು ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿಯನ್ನು ಹೆಸರಿಸದೆ ಮೋದಿ ವಾಗ್ದಾಳಿ ನಡೆಸಿದ್ದಾರೆ.

ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ; 

ಮೋದಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ “ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್” ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಈ ದಾಖಲೆಯನ್ನು ಇತ್ತೀಚೆಗೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರುತಿಸಿದೆ. 1,507 ಮೀ ಉದ್ದದ ಫ್ಲಾಟ್ ಫಾರ್ಮ್ ಸುಮಾರು ರೂ. 20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಮೇಲ್ದರ್ಜೆಗೇರಿಸಿರುವ ಹೊಸಪೇಟೆ ನಿಲ್ದಾಣವನ್ನೂ ಮೋದಿ ಉದ್ಘಾಟಿಸಿದ್ದಾರೆ. ವಿಶ್ವದ ಅತಿ ಉದ್ದದ ವೇದಿಕೆ ಎರಡು ವರ್ಷಗಳ ಹಿಂದೆ ಉದ್ಘಾಟನೆಗೆ ಸಿದ್ಧವಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಭೇಟಿ ನೀಡಿದರು ಈ ಪ್ಲಾಟ್ ಫಾರಂ ಉದ್ಘಾಟನೆ ಮಾಡಿರಲಿಲ್ಲ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ ಪ್ಲಾಟ್ ಫಾರಂ ಉದ್ಘಾಟನೆ ಮಾಡಲಿದ್ದಾರೆ ಎಂದು ಈ ಮುನ್ನವೇ ತಿಳಿಸಲಾಗಿತ್ತು.

530 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ವಿದ್ಯುದ್ದೀಕರಣ ಯೋಜನೆಯು ವಿದ್ಯುತ್ ನಿಂದ  ತಡೆರಹಿತ ರೈಲು ಕಾರ್ಯಾಚರಣೆಯನ್ನು ಸ್ಥಾಪಿಸುತ್ತದೆ. ಹೊಸಪೇಟೆ ನಿಲ್ದಾಣವನ್ನು ಪುನರಾಭಿವೃದ್ಧಿ ಮಾಡಲಾಗಿದ್ದು, ಪ್ರಯಾಣಿಕರಿಗೆ ಅನುಕೂಲಕರ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುವುದು.

Prime Minister Narendra Modi on Sunday inaugurated the permanent campus of Indian Institute of Technology (IIT) Dharwad here. The foundation stone for the institute was also laid by him in February 2019. Developed at a cost of over Rs 850 crores, the institute currently offers 4-year B.Tech. programs, inter-disciplinary 5-year BS-MS program, M.Tech. and Ph.D. programs.