ಬ್ರೇಕಿಂಗ್ ನ್ಯೂಸ್
21-03-23 11:10 am Headline Karnataka Staffer ಕರ್ನಾಟಕ
ಕಲಬುರಗಿ, ಮಾ.21: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನಾಯಕ ಬಾಬುರಾವ್ ಚಿಂಚನಸೂರು ಬಿಜೆಪಿ ಸದಸ್ಯತ್ವಕ್ಕೂ ಗುಡ್ ಬೈ ಹೇಳಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಚುನಾವಣೆ ಹೊತ್ತಲ್ಲೇ ಆಡಳಿತಾರೂಢರಿಗೆ ಶಾಕ್ ನೀಡಿದ್ದಾರೆ.
ಕಲಬುರಗಿ, ಯಾದಗಿರಿ, ಬೀದರ್ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋಲಿ ಸಮಾಜದ ಪ್ರಭಾವಿ ನಾಯಕರಾಗಿರುವ ಚಿಂಚನಸೂರ್ ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ಕೈ ಹಿಡಿಯೋದು ಪಕ್ಕಾ ಆಗಿದೆ. ಇದೇ ಮಾರ್ಚ್ 25 ರಂದು ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಮಾರ್ಚ್ 25ರಂದು ಗುರುಮಿಠಕಲ್ ನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕೈ ಪಕ್ಷ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೂರು ಬಾರಿ ಮತ್ತು ಗುರುಮಿಠಕಲ್ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಚಿಂಚನಸೂರ್, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿ ಗುರುಮಿಠಕಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ ಚಿಂಚನಸೂರ್ ಪ್ರಭಾವ ಗುರುತಿಸಿ ಬಿಜೆಪಿ ಹೈಕಮಾಂಡ್ ವಿಧಾನ ಪರಿಷತ್ ಸ್ಥಾನಕ್ಕೆ ಅವರನ್ನು ನೇಮಕ ಮಾಡಿತ್ತು. ಆದರೆ ಪರಿಷತ್ ಸದಸ್ಯನಾದರೂ ಸಚಿವ ಸ್ಥಾನ ಸಿಕ್ಕಿಲ್ಲ, ಜೊತೆಗೆ ಬಿಜೆಪಿ ರಾಜ್ಯ ನಾಯಕರು ತನ್ನನ್ನು ಕಡೆಗಣಿಸುತ್ತಿದ್ದಾರೆಂಬ ನೋವು ಅವರಲ್ಲಿತ್ತು.
ಇತ್ತೀಚೆಗೆ ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲಿದ್ದಾಗಲೇ ಚಿಂಚನಸೂರ್ ಅವರನ್ನ ಅವಮಾನಿಸಿದ್ದರು. ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ನಡೆದಿದ್ದ ದಿ. ವಿಠಲ್ ಹೇರೂರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕಡೆಯಿಂದಲೇ ಎಡವಟ್ಟು ನಡೆದಿತ್ತು. ಸಿಎಂ ಭಾಷಣದ ವೇಳೆ ಮಧ್ಯೆ ಏನೋ ಹೇಳಲು ಮುಂದಾಗಿದ್ದ ಚಿಂಚನಸೂರ್ ಅವರನ್ನ ಬೊಮ್ಮಾಯಿ ಏಕವಚನದಲ್ಲಿ ನಿಂದಿಸಿದ್ದರು. ಸ್ವಲ್ಪ ತಡಿಯೋ.. ನನಗೆ ಎಲ್ಲಾ ಗೊತ್ತು.. ನಾ ಸಿಎಂ ಇದೀನಿ.. ಇಲ್ಲಾಂದ್ರೆ ನೀನೇ ಮಾತಾಡು ಎಂದು ಹೇಳಿ ಹಿರಿಯ ನಾಯಕನನ್ನು ಅವಮಾನಿಸಿದ್ದು ಚಿಂಚನಸೂರ್ ಪಕ್ಷ ಬಿಡಲು ಪ್ರಮುಖ ಕಾರಣ ಎನ್ನಲಾಗಿದೆ.
ಅದೇ ಸಂದರ್ಭದಲ್ಲಿ ಚಿಂಚನಸೂರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹರಡಿತ್ತು. ಆದರೆ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದ ಚಿಂಚನಸೂರ್, ತಾನೇನು ಪಕ್ಷ ಬಿಟ್ಟು ಹೋಗಲ್ಲ ಎಂದಿದ್ದರು. ಇದೀಗ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿಗೆ ಸಲ್ಲಿಕೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ಸದಸ್ಯ ಸ್ಥಾನಕ್ಕು ರಾಜಿನಾಮೆ ನೀಡಿದ್ದಾರೆ
BJP MLC Baburao Chinchansur resigned on Monday. Chinchansur, who was elected unopposed as the BJP candidate in the Legislative Council elections last year, tendered his resignation, Legislative Council Chairperson Basavaraj Horatti.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm