ಬ್ರೇಕಿಂಗ್ ನ್ಯೂಸ್
21-03-23 11:12 am HK News Desk ಕರ್ನಾಟಕ
ಬೆಳಗಾವಿ, ಮಾ.21: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಪದವೀಧರ ಯುವಕರಿಗೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳಿಗೆ 3,000 ರೂ., ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಅನ್ನು ಸೋಮವಾರ ಬಿಡುಗಡೆ ಮಾಡಿದರು. ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿವೆ. ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕೆಲವು ದಿನಗಳ ಹಿಂದಷ್ಟೇ ಆಮ್ ಆದ್ಮಿ ಪಕ್ಷ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ನಿರುದ್ಯೋಗ ಭತ್ಯೆಯ ಭರವಸೆ ನೀಡಿದೆ.
ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಅದಾನಿ, ಅಂಬಾನಿಯ ಭಾರತವಲ್ಲ, ಇದು ರೈತರ, ಯುವಕರ ಭಾರತ. ದೇಶದಲ್ಲಿ ಇಂದು ದ್ವೇಷದ ಭಾವನೆ ಬಿತ್ತಲಾಗುತ್ತಿದೆ. ಕರ್ನಾಟಕ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಗುತ್ತಿಗೆದಾರರ ಬಳಿ 40% ಕಮಿಷನ್ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದರೂ ಈವರೆಗೆ ಅವರು ಕ್ರಮ ಕೈಗೊಂಡಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದರು.
ಪದವೀಧರ ಪ್ರತಿ ಯುವಕರಿಗೆ ನಾವು 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಿದ್ದೇವೆ. 2 ವರ್ಷಗಳ ಕಾಲ ಪ್ರತಿ ತಿಂಗಳು ಪದವೀಧರ ಯುವಕರಿಗೆ 3 ಸಾವಿರ ರೂ. ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ ಎಂದವರು ಹೇಳಿದರು.
ಬೆಳಗಾವಿಯಲ್ಲಿ 18 ಸ್ಥಾನ ಗೆಲ್ಲುತ್ತೇವೆ ; ಖರ್ಗೆ
ಕರ್ನಾಟಕದ ಚುನಾವಣೆ ರಾಜ್ಯಕ್ಕೆ ಬಹಳ ಮಹತ್ವದ್ದು ಮತ್ತು ಇಡೀ ದೇಶಕ್ಕೆ ಸಂದೇಶ ಕೊಡುವ ಚುನಾವಣೆಯಾಗಲಿದೆ. ಒಗ್ಗಟ್ಟಿನಿಂದ ಈ ಚುನಾವಣೆಯನ್ನು ನಾವೆಲ್ಲರೂ ಎದುರಿಸಬೇಕಾಗಿದೆ. ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ನಾನು ಇಲ್ಲಿಗೆ ಬಂದಿದ್ದೇನೆ. ಬೆಳಗಾವಿ ಕಾಂಗ್ರೆಸ್‌ಗೆ ಒಂದು ಪವಿತ್ರವಾದ ಭೂಮಿಯಾಗಿದೆ. ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷರಾಗಿ ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಇಂದು ಅದೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷನ್ನಾಗಿ ನನ್ನನ್ನು ಕುಳ್ಳಿರಿಸಿದ್ದೀರಿ. ಒಂದು ಕಾಲದಲ್ಲಿ ಬೆಳಗಾವಿ ಕಾಂಗ್ರೆಸ್ನ ಶಕ್ತಿಶಾಲಿ ಜಿಲ್ಲೆಯಾಗಿತ್ತು. ಹದಿನೆಂಟರಲ್ಲಿ ಹದಿನೈದು, ಹದಿನಾರು ಸ್ಥಾನ ಗೆಲ್ಲುತ್ತಿದ್ದೆವು. ಇಂದು ಆ ರೀತಿಯದ್ದೇ ಪರಿಸ್ಥಿತಿ ಇದೆ, ಖಂಡಿತವಾಗಿ ಹದಿನೆಂಟು ಸ್ಥಾನವನ್ನು ಬೆಳಗಾವಿಯಲ್ಲಿ ಗೆಲ್ಲುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದರು.
If Congress wins this summer’s assembly elections in Karnataka, the government will pay monthly allowances of Rs 3,000 to unemployed graduates and Rs 1,500 to diploma-holders for two years, Rahul Gandhi said Monday at his first rally in the state since his Bharat Jodo Yatra.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm