ಬ್ರೇಕಿಂಗ್ ನ್ಯೂಸ್
24-03-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಟಿಕೆಟ್ ಬೇಡಿಕೆ ಮುಂದಿಟ್ಟು ಸಿದ್ದರಾಮಯ್ಯ ನಿವಾಸದಲ್ಲಿ ಹಾಲಿ ಶಾಸಕ ಹರಿಹರ ರಾಮಪ್ಪ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಪರವಾಗಿ ಕಾರ್ಯಕರ್ತರು ಜಮಾಯಿಸಿದ್ದರು. ಕಾರ್ಯಕರ್ತರ ಜೊತೆಗೆ ಮಾತನಾಡಿಸಲು ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟದಿಂದ ಗರಂ ಆದ ಸಿದ್ದು, ಕಾರ್ಯಕರ್ತರೊಬ್ಬರ ಕಪಾಳಕ್ಕೆ ಬಾರಿಸಿದ ಪ್ರಸಂಗ ನಡೆಯಿತು.
ಶುಕ್ರವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಶಾಸಕ ರಾಮಪ್ಪ ಬೆಂಬಲಿಗರು ಆಗಮಿಸಿದ್ದರು. ರಾಮಪ್ಪ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಬಲಿಗರು ಜಮಾಯಿಸಿ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆರ್. ಶಂಕರ್ ಬೆಂಬಲಿಗರು ಕೂಡಾ ಆಗಮಿಸಿದ್ದರು. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ನೀಡುವಂತೆ ಕಾರ್ಯಕರ್ತರು ಸಿದ್ದರಾಮಯ್ಯ ಬಳಿ ಒತ್ತಾಯಿಸಿದರು.
ಈ ವೇಳೆ ಕಾರ್ಯಕರ್ತರ ಜೊತೆಗೆ ಮಾತನಾಡಲು ಸಿದ್ದರಾಮಯ್ಯ ಆಗಮಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಲು ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಉಂಟಾದ ತಳ್ಳಾಟದಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನೊಬ್ಬನಿಗೆ ಕಪಾಲಮೋಕ್ಷ ಮಾಡಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅಂತಿಮ ಹಂತದ ಲಾಬಿ ನಡೆಯುತ್ತಿದೆ. ಅದರಲ್ಲೂ ರಾಣೆಬೆನ್ನೂರು ಟಿಕೆಟ್ ಗಾಗಿ ಆರ್. ಶಂಕರ್ ಬೆಂಬಲಿಗರು ಸಿದ್ದರಾಮಯ್ಯ ಮನೆಗೆ ಬಂದಿರುವುದು ಕುತೂಹಲ ಕೆರಳಿಸಿದೆ. ಆರ್. ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನಿಸಿದ್ದರು. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಅವರ ಬೆಂಬಲಿಗರು ಸಿದ್ದರಾಮಯ್ಯ ಮನೆಯಲ್ಲಿ ಜಮಾಯಿಸಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.
An irked @siddaramaiah slaps a Congress worker outside his residence, dozens of supporters had gathered to meet him, the man who was slapped is said to have repeatedly asked Siddaramaiah about the ticket for his leader. pic.twitter.com/caGK7qKaJ5
— Deepak Bopanna (@dpkBopanna) March 24, 2023
Congress leader Siddaramaiah today slapped a man when he was reportedly surrounded by a group of supporters demanding election ticket for a party MLA.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:28 pm
Udupi Correspondent
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm