ಬ್ರೇಕಿಂಗ್ ನ್ಯೂಸ್
25-03-23 05:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದಿದ್ದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಪವಾಡ ಸದೃಶ ಬದುಕುಳಿದ ಘಟನೆ ನಡೆದಿದೆ.
ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಮನೆಯವರಿಗೂ ತಿಳಿದಿತ್ತು.
ಆದರೆ, ಇವರ ಪ್ರೀತಿಯನ್ನು ನಿರಾಕರಿಸಿದ್ದ ಎರಡೂ ಕುಟುಂಬದವರು ವ್ಯಾಸಂಗ ಮುಂದುವರಿಸಲು ಸೂಚನೆ ನೀಡಿದ್ದರು. ಇದರಿಂದ ಮನನೊಂದ ಇಬ್ಬರೂ ಬೈಕ್ನಲ್ಲಿ ರಾಮದೇವರ ಬೆಟ್ಟಕ್ಕೆ ತೆರಳಿದ್ದಾರೆ. ಪಾರ್ಕಿಂಗ್ ಜಾಗದಲ್ಲಿ ಬೈಕ್ ನಿಲ್ಲಿಸಿ, ನಂತರ ಬೆಟ್ಟಕ್ಕೆ ತೆರಳಿ, ಡೆತ್ನೋಟ್ ಬರೆದಿಟ್ಟು ಬ್ಯಾಗ್ ಮತ್ತು ಚಪ್ಪಲಿಯನ್ನು ಬಿಟ್ಟು ಬೆಟ್ಟದಿಂದ ಜಿಗಿದಿದ್ದಾರೆ.
ನಮ್ಮ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದು ಸುಮಾರು 100 ಅಡಿಗೂ ಹೆಚ್ಚು ಆಳದ ಕಂದಕಕ್ಕೆ ಜಿಗಿದಿದ್ದಾರೆ. ಇಷ್ಟು ಎತ್ತರದಿಂದ ಜಿಗಿದರೆ ಕಲ್ಲು ಬಂಡೆಗಳಿಂದ ಕೂಡಿರುವ ಪ್ರದೇಶದಲ್ಲಿ ಬದುಕುಳಿಯುವುದು ಕಷ್ಟ. ಆದರೆ ಇಬ್ಬರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಭದ್ರತೆಗೆ ನಿಯೋಜನೆ ಮಾಡಿರುವ ಹೋಂಗಾರ್ಡ್ ಸಿಬ್ಬಂದಿ, ಬೆಟ್ಟದ ಮೇಲೆ ಪರಿಶೀಲನೆ ಮಾಡುತ್ತಿದ್ದ ವೇಳೆ ಚಪ್ಪಲಿ ಮತ್ತು ಬ್ಯಾಗ್ ಇರುವುದು ಕಂಡುಬಂದಿತ್ತು. ತಕ್ಷಣವೇ ಏನೋ ಅನಾಹುತ ನಡೆದಿರಬೇಕೆಂದು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಕಂಡುಬಂದಿದೆ. ಇಬ್ಬರೂ ಮೃತಪಟ್ಟಿರಬಹುದು ಎಂದು ಅಂದಾಜಿಸಿದ್ದರೂ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದ್ದು, ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಪ್ರೇಮಿಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
The lovers who expressed their opposition to Love fell from the cliff of Ramadevara Betta and tried to commit suicide. The condition of the young man is critical, while the young woman has minor injuries and is being treated at Rajarajeshwari Hospital, Bangalore. The lovers, who had come to the deserted area of Ramdevara hill, tried to commit suicide by throwing themselves from the top of a big rock.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm