ಬ್ರೇಕಿಂಗ್ ನ್ಯೂಸ್
27-03-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವ ಹಾದಿಯಲ್ಲಿ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಇದಲ್ಲದೆ, ಬಂಧನ ಭೀತಿ ಎದುರಿಸುತ್ತಿದ್ದ ಮಾಡಾಳುಗೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಡೆಯ ಬಗ್ಗೆಯೂ ಟೀಕೆ ಕೇಳಿಬಂದಿತ್ತು. ಈ ಬಗ್ಗೆ ವಕೀಲರ ನಿಯೋಗ ಸುಪ್ರೀಂ ಕೋರ್ಟಿಗೂ ದೂರು ಬರೆದಿತ್ತು.
Bharatiya Janata Party MLA Madal Virupakshappa was arrested on Monday, hours after the Karnataka high court dismissed his bail application in a bribery case relating to Karnataka Soaps and Detergents Limited (KSDL).
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm