ಬ್ರೇಕಿಂಗ್ ನ್ಯೂಸ್
28-03-23 10:50 am HK News Desk ಕರ್ನಾಟಕ
ಶಿವಮೊಗ್ಗ, ಮಾ.28: ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆ ನೆಪದಲ್ಲಿ ಮಾಜಿ ಸಿಎಂ ಬಿಎಸ್ ವೈ ಮನೆ ಮೇಲೆ ಕಲ್ಲು ತೂರಿದ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಜನರನ್ನು ಶಿಕಾರಿಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಜಾರ ಸಮುದಾಯದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ, ಕುಮಾರ್ ನಾಯ್ಕ ಸೇರಿದಂತೆ 15 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ. ಶಿಕಾರಿಪುರ ತಾಪಂ ಮಾಜಿ ಅಧ್ಯಕ್ಷ ಸುರೇಶ್ ನಾಯ್ಕ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಂಜಾರ ಸಮುದಾಯದ ಮುಖಂಡರು ಮತ್ತು ಭೋವಿ ಸಮಾಜದ ಮುಖಂಡರನ್ನೂ ವಶಕ್ಕೆ ಪಡೆಯಲಾಗಿದೆ.
ತನ್ನ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸದಂತೆ ಮಾಜಿ ಸಿಎಂ ಯಡಿಯೂರಪ್ಪ ಸೂಚಿಸಿದ್ದರು. ಆದರೆ, ರಾಜಕೀಯ ಷಡ್ಯಂತ್ರದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂಬ ಗುಮಾನಿ ಎದ್ದಿರುವುದರಿಂದ ಸಮಾಜದ ಮುಖಂಡರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಮುಖಂಡರನ್ನು ವಶಕ್ಕೆ ಪಡೆದಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿನ್ನೆ ತಡರಾತ್ರಿ ವರೆಗೂ ಯುವಕರು ಪ್ರತಿಭಟನೆ ನಡೆಸಿದ್ದಾರೆ.
ಇದೇ ವೇಳೆ, ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ ನಡೆಸಿದ ಕ್ರಮವನ್ನು ವೀರಶೈವ ಲಿಂಗಾಯತ ಪ್ರಮುಖರು ಖಂಡಿಸಿದ್ದು ಹೇಳಿಕೆ ನೀಡಿದ್ದಾರೆ. ಪ್ರತಿಭಟನೆ ನಡೆಸಿದ್ದಕ್ಕೆ ವಿರೋಧ ಇಲ್ಲ. ಯಡಿಯೂರಪ್ಪ ಮನೆಯೇ ಯಾಕೆ ಟಾರ್ಗೆಟ್ ಆಯ್ತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಅಥವಾ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬಹುದಿತ್ತು. ಮನೆಯ ಮೇಲೆ ಕಲ್ಲು ತೂರಿದ್ದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ಹಿಂಸೆಗೆ ತಿರುಗಿದ್ದ ಪ್ರತಿಭಟನೆ, ಪೊಲೀಸರಿಗೆ ಕಲ್ಲೇಟು
ಸೋಮವಾರ ಮಧ್ಯಾಹ್ನ ಬಂಜಾರ, ಬೋವಿ ಮತ್ತು ಕೊರಮ ಸಮಯದಾಯದ ಜನ ಮೊದಲು ಪ್ರತಿಭಟನಾ ಮೆರವಣಿಗೆ ಬಂದು ತಹಸೀಲ್ದಾರ್ ಗೆ ಮನವಿ ನೀಡಲು ಮುಂದಾಗಿದ್ದರು. ಅದಕ್ಕೆ ಅವಕಾಶ ಕೊಡಲಿಲ್ಲ. ಇದರಿಂದಾಗಿ ಸ್ಥಳೀಯ ಶಾಸಕ ಯಡಿಯೂರಪ್ಪ ಮತ್ತು ಸಂಸದ ಬಿವೈ ರಾಘವೇಂದ್ರ ಮನೆಯತ್ತ ಪ್ರತಿಭಟನೆಕಾರರು ತೆರಳಿದ್ದರು. ಈ ವೇಳೆ, ಮನೆಯ ಸುತ್ತ ಬ್ಯಾರಿಕೇಡ್ ಹಾಕಿ ಪೊಲೀಸರು ಕಾವಲು ನಿಂತಿದ್ದರು. ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಸಿ, ಬ್ಯಾರಿಕೇಡ್ ಮುರಿದು ಯುವಕರು ಒಳನುಗ್ಗಲು ಯತ್ನಿಸಿದ್ದರು. ಈ ವೇಳೆ, ಕಲ್ಲು ತೂರಾಟ ನಡೆದಿದ್ದು ಶಿಕಾರಿಪುರ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಲಕ್ಷ್ಮಣ್, ನಗರ ಠಾಣೆ ಪಿಎಸ್‌ಐ ಮಂಜುನಾಥ ಕೊಪ್ಪಲೂರು, ಕಾನ್‌ಸ್ಟೇಬಲ್‌ಗಳಾದ ಶಂಕರಗೌಡ ಹಾಗೂ ಕಾಂತರಾಜು ಅವರ ತಲೆಗೆ ಕಲ್ಲೇಟು ಬಿದ್ದಿದೆ. ಇದಲ್ಲದೆ, ಹಲವು ಪೊಲೀಸರಿಗೆ ಕೈ ಕಾಲಿಗೆ ಗಾಯಗಳಾಗಿವೆ. ನೂಕುನುಗ್ಗಲು ಆಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು ಉದ್ರಿಕ್ತರನ್ನು ಚದುರಿಸಿದ್ದಾರೆ. ನೂಕುನುಗ್ಗಲಿಗೆ ಸಿಲುಕಿ ಹಲವರು ಗಾಯಗೊಂಡಿದ್ದಾರೆ.
ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆ ಶಿಕಾರಿಪುರಕ್ಕೆ ಸೀಮಿತವಾಗಿಲ್ಲ. ವಿಜಯಪುರ, ಬೀದರಿನಲ್ಲೂ ಪ್ರತಿಭಟನೆ ಶುರುವಾಗಿದ್ದು ಒಳ ಮೀಸಲಾತಿ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ ಆರಂಭಿಸಿದೆ. ಇದೇ ವೇಳೆ, ಸಿಎಂ ಬೊಮ್ಮಾಯಿ ಪ್ರತಿಭಟನೆ, ಹಿಂಸಾಚಾರದ ಹಿಂದೆ ಕಾಂಗ್ರೆಸ್ ಕುಮ್ಮಕ್ಕು ಇದೆ ಎಂದಿದ್ದಾರೆ.
Stone pelting on Yediyurappa’s home in Shikaripura in Shivamogga, 15 leaders arresred by police. Members of the Banjara community on Monday attacked former chief minister and BJP leader BS Yediyurappa's residence in Shivamogga's Shikaripur, opposing the internal reservation recommended by the state government to the Centre.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm