ಬ್ರೇಕಿಂಗ್ ನ್ಯೂಸ್
28-03-23 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮೇಲಿಂದ ಮೇಲೆ ಶಾಕ್ ಸಿಗ್ತಾ ಇದೆ. ಮುಖ್ಯಮಂತ್ರಿ ತವರು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ನಾಯಕರೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಸಿಎಂ ಬೊಮ್ಮಾಯಿ ಆಪ್ತನೆಂದು ಗುರುತಿಸಿದ್ದ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಅವರ ಪುತ್ರ ರಾಜು ಕುನ್ನೂರು ತಮ್ಮ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಸೇರಿದ್ದಾರೆ. ಚಿಂತಾಮಣಿಯ ನಾಯಕರಾದ ಎಂ.ಸಿ. ಸುಧಾಕರ್ ಹಾಗೂ ಕೆ.ಆರ್ ಪೇಟೆ ಕ್ಷೇತ್ರದ ಜೆಡಿಎಸ್ ನಾಯಕ ಬಿಎಲ್ ದೇವರಾಜು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಬಂಟನಂತಿದ್ದ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು.
‘ರಾಜ್ಯದ ಮುಖ್ಯಮಂತ್ರಿಗಳು ತನ್ನ ಆಪ್ತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವಾಗ ರಾಜ್ಯದ ಜನರ ವಿಶ್ವಾಸ ಗಳಿಸಲು ಸಾಧ್ಯವೇ? ಮಂಜುನಾಥ್ ಕುನ್ನೂರ ಅವರು ಲೋಕಸಭೆ ಮಾಜಿ ಸದಸ್ಯರು, ಮೂರು ಬಾರಿ ಶಾಸಕರಾಗಿದ್ದರು. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವ ಹಾಗೂ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ ನಾಯಕರೇ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಸೇರ್ಪಡೆ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಂಬರುವ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಮಂಜುನಾಥ್ ಹಾಗೂ ಅವರ ಜತೆ ಬಂದಿರುವ ಎಲ್ಲ ನಾಯಕರಿಗೆ ನಾನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ’ ಎಂದರು.
ಚಿಂತಾಮಣಿಯ ಜೆಡಿಎಸ್ ನಾಯಕರನ್ನು ಸೇರ್ಪಡೆ ಮಾಡಿಕೊಂಡು, ‘ಜಾತ್ಯಾತೀತ ಜನತಾದಳ ತ್ಯಜಿಸಿ ಚಿಂತಾಮಣಿ ಕ್ಷೇತ್ರದ ಮೂವರು ಪ್ರಮುಖ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷ ಸೇರುತ್ತಿದ್ದಾರೆ. ಯುವ ಮಿತ್ರ ಸುಧಾಕರ್ ಅವರು ಸಾಕಷ್ಟು ಬಾರಿ ನನ್ನನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ತಿಳಿಸಿದ್ದರು. ಚಿಂತಾಮಣಿಯ ರಿಯಾಜ್ ಪಾಷಾ, ಮಹೇಶ್, ಭಾಸ್ಕರ್, ಕೃಷ್ಣಾ ರೆಡ್ಡಿ ಅಮರ್, ಮಹಮದ್ ಶಫಿವುಲ್ಲಾ, ಸಾಮ್ರಾಟ್, ಇರ್ಫಾನ್ ಖಾನ್, ಆರ್. ಪ್ರಸಾದ್, ವೆಂಕಟರೆಡ್ಡಿ, ನವೀನ್, ವಿಜಯ್, ಶ್ರೀನಿವಾಸ್ ಯಾದವ್ ಸೇರಿದಂತೆ ವಿವಿಧ ಸಮುದಾಯದ ಅನೇಕ ಮುಖಂಡರು ಪಕ್ಷ ಸೇರುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಮಾತ್ರವಲ್ಲ, ರಾಜ್ಯ ಹಾಗೂ ದೇಶಕ್ಕೆ ಶಕ್ತಿ ತುಂಬಲು ನೀವೆಲ್ಲ ಕಾಂಗ್ರೆಸ್ ಸೇರುತ್ತಿದ್ದೀರಿ. ನಿಮಗೆ ಸ್ವಾಗತ ಕೋರುತ್ತೇನೆ ಎಂದರು.
In a major coup against Chief Minister Basavaraj Bommai, KPCC chief D K Shivakumar managed to wean away Manjunath Kunnur, senior BJP leader and close confident of Bommai from his home district of Haveri along with his son Raju Kunnur, KR Pet JD(S) leader Devaraj, Shivamogga BJP leader Arun and other prominent JD(S) leader Sudhakar and others from Chintamani with their supporters and were accorded warm welcome.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm