ಬಿಜೆಪಿ ಶಾಸಕ ಮಾಡಾಳ್‌ ಬಂಧನ ; ಲೋಕಾಯುಕ್ತ ಪೊಲೀಸರ ಫುಲ್ ಡ್ರಿಲ್, 5 ದಿನ ಪೊಲೀಸ್ ಕಸ್ಟಡಿಗೆ  ನ್ಯಾಯಾಲಯ ಆದೇಶ 

28-03-23 04:57 pm       Bangalore Correspondent   ಕರ್ನಾಟಕ

ಲಂಚ ಪ್ರಕರಣದ ಪ್ರಮುಖ ಆರೋಪಿ, ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಮಂಗಳವಾರ ಆದೇಶ ನೀಡಿದೆ.

ಬೆಂಗಳೂರು, ಮಾ.28: ಲಂಚ ಪ್ರಕರಣದ ಪ್ರಮುಖ ಆರೋಪಿ, ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಮಂಗಳವಾರ ಆದೇಶ ನೀಡಿದೆ.

ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಜತೆಗೆ ಮಾಡಾಳ್ ವಿರೂಪಾಕ್ಷಪ್ಪ ಅನಾರೋಗ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು. ಅಂತಿಮವಾಗಿ ಜಡ್ಜ್​ ಬಿ.ಜಯಂತ್ ಕುಮಾರ್ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಮಾಡಾಳ್ ಬಂಧನಕ್ಕೆ ಬಲೆ ಬೀಸಿದ್ದರು.

Karnataka Bharatiya Janata Party (BJP) MLA Madal Virupakshappa was arrested by Lokayukta police in a bribery case on Monday evening.
Earlier, the police detained Channagiri MLA at Katyasandra. Virupakshappa's anticipatory bail application was rejected by the Karnataka high court .earlier in the day.