ನೋಟು ಎಸೆದ ಡಿಕೆಶಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರಿತ್ತ ಬಿಜೆಪಿ ; ಎಸ್ಡಿಪಿಐ ಅವಹೇಳನ ಬಗ್ಗೆಯೂ ದೂರು 

29-03-23 10:29 pm       Bangalore Correspondent   ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ರೋಡ್ ಶೋ ವೇಳೆ ಕಲಾವಿದರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರದಲ್ಲಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. 

ಬೆಂಗಳೂರು, ಮಾ.29 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ರೋಡ್ ಶೋ ವೇಳೆ ಕಲಾವಿದರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರದಲ್ಲಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. 

ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ತೆರೆದ ಬಸ್​​ನಲ್ಲಿ ರೋಡ್​ ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್​ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್ಡಿಪಿಐ ಮುಖಂಡನೊಬ್ಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರದಲ್ಲೂ ದೂರು ಸಲ್ಲಿಸಲಾಗಿದೆ. 

ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

Karnataka CM Bommai promises to fill up one lakh govt posts | Deccan Herald

ಮುಸ್ಲಿಮರ ಮೀಸಲಾತಿ ವಾಪಸ್ ಕೊಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಡ್ಡಿ ಬಿಚ್ಚಿಸುತ್ತೇವೆ ಎಂದು ಚಿತ್ರದುರ್ಗ ಜಿಲ್ಲೆಯ ಎಸ್​​ಡಿಪಿಐ ಮುಖಂಡರೊಬ್ಬರು ಇತ್ತೀಚೆಗೆ ಹೇಳಿದ್ದರು. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸುವ ಬಗ್ಗೆ ಕಳೆದ ವಾರ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್​ಡಿಪಿಐ ಮುಖಂಡರು ಬಿಜೆಪಿ ಹಾಗೂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದರು.

Karnataka BJP Wednesday filed a complaint against state Congress president DK Shivakumar after videos of him showering currency notes on crowds during a roadshow emerged on Tuesday.