ಬ್ರೇಕಿಂಗ್ ನ್ಯೂಸ್
31-03-23 09:33 pm HK News Desk ಕರ್ನಾಟಕ
ಮೈಸೂರು, ಮಾ.31 : ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಆತ ಶಿಕಾರಿಪುರ ಬಿಟ್ಟು ಬರಲ್ಲ. ಎರಡು ಕಡೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಇದರ ಬಗ್ಗೆ ಹೇಳಿದ್ದೇನೆ. ಹೈಕಮಾಂಡ್ ಗೆ ಮನವರಿಕೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸುತ್ತಾರೆಂಬ ವದಂತಿಗೆ ತೆರೆ ಎಳೆದಿದ್ದಾರೆ.
ಮೈಸೂರಿನಲ್ಲಿ ಈ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಅವರು, ವಿಜಯೇಂದ್ರ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಶಿಕಾರಿಪುರ ನನ್ನನ್ನು ಸಿಎಂ ಮಾಡಿದ ಕ್ಷೇತ್ರ. ಆ ಕ್ಷೇತ್ರವನ್ನ ಬಿಡಲು ಸಾಧ್ಯವಿಲ್ಲ ಎಂದರು.
ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ನೀಡಿತ್ತು. ಆದರೆ ನಾನೇ ವರುಣಾದಿಂದ ಸ್ಪರ್ಧೆ ಬೇಡ ಎಂದು ಹೇಳಿದ್ದೇನೆ. ಈ ವಿಚಾರದಲ್ಲಿ ನಾನು ಹೈಕಮಾಂಡ್ ಮನವೊಲಿಸುತ್ತೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಾದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ. ಶಿಕಾರಿಪುರ ಬಿಟ್ಟು ಅವರು ಬರುವುದಿಲ್ಲ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡುತ್ತಾರೆ. ವರುಣಾ ಕ್ಷೇತ್ರದಿಂದ ಒಳ್ಳೆ ಅಭ್ಯರ್ಥಿ ಹಾಕುತ್ತೇವೆ ಎಂದರು.
ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ಇತ್ತು. ಆದ್ರೆ ನಾನೇ ಶಿಕಾರಿಪುರದಿಂದ ನಿಲ್ಲಬೇಕು ಅಂಥ ಹೇಳಿದ್ದೇನೆ. ನಾನು ಶಿಕಾರಿಪುರದಿಂದ ಸ್ಪರ್ಧೆ ಮಾಡದ ಕಾರಣ ವಿಜಯೇಂದ್ರ ಅಲ್ಲಿಂದ ಸ್ಪರ್ಧೆ ಮಾಡಬೇಕು. ಇದು ನನ್ನ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Former Karnataka chief minister and senior BJP leader BS Yediyurappa on Friday ruled out speculation that his son BY Vijayendra will be fielded from Varuna constituency. Senior Congress leader Siddaramaiah is contesting from Varuna constituency. Yediyurappa said his son would fight the election from Shikaripura.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 03:04 pm
HK News Desk
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm