ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್‌ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್‌ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್‌ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್‌ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್‌ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್‌ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm