ಬ್ರೇಕಿಂಗ್ ನ್ಯೂಸ್
03-04-23 03:59 pm HK News Desk ಕರ್ನಾಟಕ
ಶಿವಮೊಗ್ಗ, ಎ.3: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶುವನ್ನು ನಾಯಿಯೊಂದು ಬಾಯಿಯಲ್ಲಿ ಕಚ್ಚಿಕೊಂಡು ಬಂದ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ ಕಡೆಯಿಂದ ಬಾಯಿಯಲ್ಲಿ ನವಜಾತ ಶಿಶುವನ್ನು ನಾಯಿ ಕಚ್ಚಿಕೊಂಡು ಬರುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದು, ಆಸ್ಪತ್ರೆಯ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಾಯಿಯನ್ನು ಓಡಿಸಿ ಮಗುವನ್ನು ಪರೀಕ್ಷಿಸಿದಾಗ ಅದು ಮೃತಪಟ್ಟಿರುವುದು ದೃಢಪಟ್ಟಿದೆ.
ಆಸ್ಪತ್ರೆ ಹಿಂಭಾಗ ಮಗು ಬಿಟ್ಟು ಹೋಗಲಾಗಿತ್ತು ;
ನವಜಾತ ಶಿಶುವನ್ನು ಯಾರೋ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ ಹಿಂಭಾಗ ಬಿಟ್ಟು ಹೋಗಿರುವುದಾಗಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಶಂಕಿಸಲಾಗಿದೆ. ಶಿಶು ಮೃತಪಟ್ಟಿದ್ದು, ನಾಯಿ ಕಚ್ಚಿಕೊಂಡು ಓಡಾಡಿದೆ. ಹೆತ್ತವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೆಗ್ಗಾನ್ ಆಸ್ಪತ್ರೆ ಭದ್ರತಾ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮೃತ ಮಗು ಮೆಗ್ಗಾನ್ ಆಸ್ಪತ್ರೆಯಲ್ಲಿ ಜನಿಸಿಲ್ಲ ;
ಯಾರೋ ಹೊರಗಡೆಯಿಂದ ಶಿಶುವನ್ನು ತಂದು ಎಸೆದಿರಬಹುದು ಎಂಬ ಶಂಕೆ ಇದೆ. ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕಾಗಿರುವುದು ಆಯಾ ಆಸ್ಪತ್ರೆ ಆದ್ಯ ಕರ್ತವ್ಯ. ಅದನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಸರಿಯಾಗಿ ಮಾಡಲಾಗುತ್ತಿದೆ. ಜತೆಗೆ, ಶಿಶು ನಮ್ಮ ಆಸ್ಪತ್ರೆಯಲ್ಲಿ ಜನಿಸಿಯೇ ಇಲ್ಲ. ಬೇರೆಯ ತಾಲೂಕಿನಲ್ಲಿ ಜನಿಸಿರಬಹುದಾದ ಮಗುವನ್ನು ಇಲ್ಲಿ ತಂದು ಹಾಕಿರುವ ಸಾಧ್ಯತೆಯೂ ಇರಬಹುದು. ಈ ಬಗ್ಗೆ ಆಸ್ಪತ್ರೆಯ ಡಿಎಚ್‌ಒ ಅವರ ಗಮನಕ್ಕೆ ತರಲಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ. ಶ್ರೀಧರ್ ತಿಳಿಸಿದ್ದಾರೆ.
ಪ್ರಿಮೆಚ್ಯೂರ್ ಹೆರಿಗೆಯ ಶಂಕೆ ;
ಸದ್ಯ ಮೃತ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಿ, ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಮೃತ ಶಿಶು 900 ಗ್ರಾಂ ತೂಕ ಹೊಂದಿದ್ದು, ಪ್ರಿಮೆಚ್ಯೂರ್ ಹೆರಿಗೆ ಆಗಿರಬಹುದು ಎಂದು ಶಂಕಿಸಲಾಗಿದೆ. ಜತೆಗೆ, ಇದರ ಹೆರಿಗೆ ಮೆಗ್ಗಾನ್‌ನಲ್ಲಿ ಆಗಿಲ್ಲ. ಈ ಕುರಿತು ಮಾಹಿತಿ ಕಲೆ ಹಾಕುವುದಕ್ಕಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸುತ್ತಿರುವ ತಂಡಗಳಿಗೆ, 15 ದಿನಗಳಲ್ಲಿ ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿಆಗಿರುವ ಹೆರಿಗೆಗಳ ಬಗ್ಗೆ ಮೂರು ದಿನಗಳಲ್ಲಿ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ಡಿಎಚ್‌ಒ ಡಾಕ್ಟರ್ ರಾಜೇಶ್ ಸುರಗಿಹಳ್ಳಿ ಹೇಳಿದ್ದಾರೆ.
An incident of a stray dog running around with a newborn baby in its mouth has been reported from McGann Teaching District Hospital here. The dog was found carrying the newborn in its mouth in the wee hours of March 31, but the incident came to light on Sunday.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am