ಬಿಜೆಪಿ ಮೊದಲ ಪಟ್ಟಿಯಲ್ಲೇ ಅಚ್ಚರಿ ಹೆಸರು ; ಹಲವೆಡೆ ಹೊಸ ಮುಖಗಳಿಗೆ ಮಣೆ ಎಂದ ಮುಖ್ಯಮಂತ್ರಿ 

04-04-23 04:33 pm       Bangalore Correspondent   ಕರ್ನಾಟಕ

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎನ್ನುವ ವದಂತಿ ಇದೆ. ಇದರ ನಡುವಲ್ಲೇ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದು, ಬಿಜೆಪಿ ಮೊದಲ ಪಟ್ಟಿಯಲ್ಲೇ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರು, ಎ.4 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎನ್ನುವ ವದಂತಿ ಇದೆ. ಇದರ ನಡುವಲ್ಲೇ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದು, ಬಿಜೆಪಿ ಮೊದಲ ಪಟ್ಟಿಯಲ್ಲೇ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಾಗುವುದು ಎಂದು ಹೇಳಿದ್ದಾರೆ.

ಎಪ್ರಿಲ್ 4 ಮತ್ತು 5ರಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಇಂದು ಸಭೆಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಬಾರಿ ಬಿಜೆಪಿ ಪಟ್ಟಿಯಲ್ಲಿ ಹಲವು ಅಚ್ಚರಿಯ ಪ್ಯಾಕೇಜ್‌ಗಳು ಇರಲಿವೆ. ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಚ್ಚರಿಗಳು ಇರಲಿವೆ. ಹಲವು ಕಡೆ ಹೊಸ ಪ್ರಯೋಗ ಮಾಡಲಾಗುವುದು. ಈ ರೀತಿಯ ಪ್ರಯೋಗ ಹಲವು ರಾಜ್ಯಗಳಲ್ಲಿ ಯಶಸ್ವಿಯಾಗಿದ್ದು ಮೊದಲ ಪಟ್ಟಿಯಲ್ಲೇ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು. 

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಎರಡು ದಿನಗಳ ಜಿಲ್ಲಾ ಮಟ್ಟದ ಸಮಿತಿಗಳ ಸಭೆ ಮುಗಿದಿದೆ. ಇಂದು ಮತ್ತು ನಾಳೆ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಮಿತಿಗೆ ಕಳುಹಿಸಲಾಗುವುದು. ಏಪ್ರಿಲ್ 8 ರಂದು ಕೇಂದ್ರ ಸಮಿತಿಯಿಂದ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಪ್ರಜಾಸತ್ತಾತ್ಮಕ ರೀತಿಯಲ್ಲಿ ಟಿಕೆಟ್‌ಗಳನ್ನು ವಿತರಿಸಲಾಗುವುದು, ತಳಮಟ್ಟದಿಂದ ವರದಿಗಳನ್ನು ಪಡೆದ ನಂತರ, ಅದರ ಆಧಾರದಲ್ಲಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು. ಇದಲ್ಲದೆ, ಸಿಎಂ ಬೊಮ್ಮಾಯಿ ಎಪ್ರಿಲ್ 7ರಂದು ದೆಹಲಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ಇದೆ.

Karnataka Chief Minister Basavaraj Bommai on Tuesday stated that the BJP would announce tickets to new faces in several constituencies in the first list. Talking to reporters ahead of the state election committee meeting, CM Bommai stated that there are going to be surprise packages. "In this general election there will be surprise in thje selection of candidates.