ಬ್ರೇಕಿಂಗ್ ನ್ಯೂಸ್
05-04-23 11:43 am HK News Desk ಕರ್ನಾಟಕ
ಮೂಡುಬಿದ್ರೆ, ಎ.5 : ಕೃಷಿ ತಜ್ಞ, ‘ಕೃಷಿ ಋಷಿ’ ಎಂದೇ ಗುರುತಿಸಿಕೊಂಡಿದ್ದ ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್ ಸ್ಥಾಪಕ, ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್(89) ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಡಾ.ಎಲ್.ಸಿ.ಸೋನ್ಸ್ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ತನ್ನೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡ ಸಹೋದರ ಐ.ವಿ. ಸೋನ್ಸ್ ಅವರನ್ನು ಅಗಲಿದ್ದಾರೆ.
1934 ಎಪ್ರಿಲ್ 4ರಂದು ಜನಿಸಿದ್ದ ಡಾ.ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಇದೇ ಎ.4ರ ಮಂಗಳವಾರವಷ್ಟೇ 89 ವರ್ಷ ತುಂಬಿ 90ಕ್ಕೆ ಕಾಲಿರಿಸಿದ್ದರು. ಡಾ.ಎಲ್.ಸಿ ಸೋನ್ಸ್ ತಮ್ಮ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು. ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅವರು ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಭೇದಗಳು, ದೇಶ -ವಿದೇಶಗಳ ಹಣ್ಣು- ತರಕಾರಿ ಪ್ರಭೇದಗಳನ್ನು ಮೂಡುಬಿದಿರೆ ಸಮೀಪದ ಬನ್ನಡ್ಕದಲ್ಲಿ ಬೆಳೆಸಿ, ಅದರಿಂದ ಲಾಭ ಗಳಿಸಿದ್ದರು. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿಯನ್ನು ಹೊಂದಿದ್ದರು.
ಆಧುನಿಕ ಕೃಷಿಯಿಂದ ಹಣ್ಣು ಹಂಪಲು ಬೆಳೆಯಬಹುದು, ಲಾಭ ಮಾಡಿಕೊಳ್ಳಬಹುದು ಎಂಬುದನ್ನು ಸೋನ್ಸ್ ಅವರು ನಿರೂಪಿಸಿದ್ದರು. ಇದರ ಜೊತೆಗೆ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಸೋನ್ಸ್ ಅವರು ಹಲವಾರು ಸಂಘ ಸಂಸ್ಥೆಗಳ ಸಕ್ರಿಯ ಪದಾಧಿಕಾರಿ. ಅಮೆರಿಕನ್ ಸೊಸೈಟಿ ಆಫ್ ಡೌಸರ್ ಸದಸ್ಯ, ಬ್ರಿಟಿಷ್ ಸೊಸೈಟಿ ಆಫ್ ಡೌಸರ್ ಅಜೀವ ಸದಸ್ಯರೂ ಆಗಿದ್ದರು.
ಕೃಷಿ ಮತ್ತು ಮಾನವನ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಆಲ್ಫ್ರೆಡ್ ಸೋನ್ಸ್ ಫೌಂಡೇಶನ್ ಎಂಬ ಸಂಸ್ಥೆ ಸ್ಥಾಪಿಸಿದ್ದರು. ಬೆಂಗಳೂರು ಕೃಷಿ ವಿವಿಯಿಂದ ಉತ್ತಮ ತೋಟಗಾರಿಕಾ ಸಾಧಕ ಪ್ರಶಸ್ತಿ, ಅಮೆರಿಕದ ಮೊಟಾನಾ ವಿವಿಯಿಂದ ವಿಶೇಷ ಹಳೆ ವಿದ್ಯಾರ್ಥಿ ಪ್ರಶಸ್ತಿ ಪಡೆದಿದ್ದು, ಅಮೇರಿಕದ ಹಳೆ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಅನ್ಯ ದೇಶದಿಂದ ಪ್ರಶಸ್ತಿ ಪಡೆದ ಮೊದಲ ಭಾರತೀಯ ವ್ಯಕ್ತಿ ಡಾ. ಎಲ್.ಸಿ . ಸೋನ್ಸ್ ಆಗಿದ್ದರು.
Internationally renowned agricultural scientist Dr Livingston Chandramohan (L C) Soans, known for ‘Soans Farm’, passed away on Wednesday April 5. He was 89. Born in 1934, Dr Soans had his basic schooling at Mission School, Jain High School and college education at St Aloysius College Mangaluru and Christian College Madras.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm