ಬ್ರೇಕಿಂಗ್ ನ್ಯೂಸ್
05-04-23 02:04 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ಖ್ಯಾತ ಚಿತ್ರನಟ ಸುದೀಪ್ ಬಿಜೆಪಿ ಸೇರುತ್ತಾರೆಂಬ ವದಂತಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ತಾನು ಯಾವುದೇ ಪಕ್ಷ ಸೇರುವುದಿಲ್ಲ. ಜೊತೆಗೆ, ಯಾವುದೇ ಕಡೆ ಸ್ಪರ್ಧೆಯನ್ನೂ ಮಾಡೋದಿಲ್ಲ ಎಂದು ಹೇಳಿದ್ದಾರೆ.
ನಟ ಸುದೀಪ್ ಜೊತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸುತ್ತಾರೆ, ಅಧಿಕೃತವಾಗಿ ಬಿಜೆಪಿಗೆ ಸೇರುತ್ತಾರೆಂದು ಬೆಳಗ್ಗಿನಿಂದಲೇ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ, ನಟ ಪ್ರಕಾಶ್ ರೈ ಬಿಜೆಪಿ ಸೋಲುವ ಭಯದಲ್ಲಿ ಸುದೀಪ್ ಅವರನ್ನು ಕರೆಸಿಕೊಳ್ಳುತ್ತಿದೆ. ಆದರೆ ಸುದೀಪ್ ಅವರು ತಮ್ಮನ್ನು ಮಾರಿಕೊಳ್ಳಲ್ಲ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದರು. ಇದಲ್ಲದೆ, ಸುದೀಪ್ ಅವರಿಗೆ ಬೆದರಿಕೆ ಒಡ್ಡಲಾಗಿದೆ ಎನ್ನುವ ಸುದ್ದಿಗಳೂ ಬಂದಿದ್ದವು. ಆದರೆ, ಆ ಬೆದರಿಕೆ ಪತ್ರ ವಾರದ ಮೊದಲೇ ಬಂದಿದೆ ಎನ್ನಲಾಗುತ್ತಿದ್ದು, ಆ ಬಗ್ಗೆ ಪೊಲೀಸ್ ದೂರು ಕೂಡ ದಾಖಲಾಗಿದೆಯಂತೆ.
ಈ ನಡುವೆ, ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಸುದೀಪ್, ನಾನು ಯಾವುದೇ ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದಿದ್ದಾರೆ. ಅಲ್ಲದೆ, ನನಗೆ ಕೆಲವರು ತುಂಬ ಆಪ್ತರಿದ್ದಾರೆ, ನಾನು ಸಣ್ಣಂದಿನಿಂದ ಇಷ್ಟು ಎತ್ತರಕ್ಕೆ ಕಾರಣವಾದ ಕೆಲವರಿದ್ದಾರೆ. ಅವರನ್ನು ಬಿಟ್ಟಾಕಲಾಗದು. ನಾನು ಆ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ಕೊಡುತ್ತೇನೆ. ಆದರೆ ಒಂದಂತೂ ಸ್ಪಷ್ಟ. ನಾನು ಚುನಾವಣೆ ಸ್ಪರ್ಧೆ ಮಾಡಲ್ಲ. ಪಕ್ಷ ಸೇರ್ಪಡೆಯೂ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಸುದೀಪ್ ಬಹುತೇಕ ಬಿಜೆಪಿ ಕೆಲವು ಶಾಸಕರ ಪರವಾಗಿ ಪ್ರಚಾರ ನಡೆಸುವುದಂತೂ ಖಚಿತ ಎನ್ನಲಾಗಿದೆ.
ಇತ್ತೀಚೆಗೆ ನಟ ಸುದೀಪ್ ಅವರನ್ನು ಪಕ್ಷಕ್ಕೆ ಆಹ್ವಾನಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆದರೆ ಕಾಂಗ್ರೆಸ್ ಸೇರುವ ಬಗ್ಗೆಯಾಗಲೀ, ಭೇಟಿಯ ಬಗ್ಗೆಯಾಗಲೀ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಸಿಎಂ ಬೊಮ್ಮಾಯಿ, ಸಚಿವರಾದ ಅಶೋಕ್, ಸುಧಾಕರ್ ಅವರು ಸುದೀಪ್ ಜೊತೆಗೆ ಸುದ್ದಿಗೋಷ್ಟಿ ನಡೆಸಿದ್ದಾರೆ.
Amid speculations over Kannada movie star Kiccha Sudeep joining the Bhartiya Janata Party ahead of the Karnataka assembly elections, the actor has cleared the air stating that he will only be campaigning for the party but will not contesting elections. Earlier, he was set to visit the party's state headquarters at 1:30 pm. Other than Sudeep, several other prominent actors were also approached to be star campaigners for the elections.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am