ಕಾಂಗ್ರೆಸ್ ಎರಡನೇ ಪಟ್ಟಿಯಲ್ಲೂ ಕರಾವಳಿಗೆ ಸಸ್ಪೆನ್ಸ್ ; 42 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ, ಉಡುಪಿಗೆ ಪ್ರಸಾದ್ ಕಾಂಚನ್

06-04-23 12:36 pm       HK News Desk   ಕರ್ನಾಟಕ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದ್ದು, 42 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು ಮತ್ತೆ 42 ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಿದೆ.

ಬೆಂಗಳೂರು, ಎ.6: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದ್ದು, 42 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು ಮತ್ತೆ 42 ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಈ ಬಾರಿಯೂ ಟಿಕೆಟ್ ಘೋಷಣೆ ಆಗಿಲ್ಲ. ‌ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಪುತ್ತೂರು ಕ್ಷೇತ್ರದ ಸಸ್ಪೆನ್ಸ್ ಉಳಿಸಿಕೊಳ್ಳಲಾಗಿದೆ. ಉಡುಪಿ ಕ್ಷೇತ್ರದಲ್ಲಿ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದಿದ್ದಾರೆ. ಕಾರ್ಕಳ ಕ್ಷೇತ್ರದ ಟಿಕೆಟ್ ಅಂತಿಮ ಆಗಿಲ್ಲ. ಉಳಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡದಲ್ಲಿ ಟಿಕೆಟ್ ಪಡೆದಿದ್ದಾರೆ. ವಿನಯ ಕುಲಕರ್ಣಿ ಸಿಎಂ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧೆ ಮಾಡಲಿದ್ದಾರೆಂದು ಹೇಳಲಾಗಿತ್ತು.

ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಕಲಘಟಕಿ ಕ್ಷೇತ್ರದಿಂದ ಸಂತೋಷ್ ಲಾಡ್, ಕಡೂರು ಕ್ಷೇತ್ರದಲ್ಲಿ ಕೆ.ಎಸ್. ಆನಂದ್ ಟಿಕೆಟ್ ಪಡೆದಿದ್ದಾರೆ. ಕಡೂರು ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯ ಬಣದ ವೈಎಸ್ ವಿ ದತ್ತಾ ನಿರಾಸೆಗೊಂಡಿದ್ದಾರೆ.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಬುರಾವ್ ಚಿಂಚನಸೂರು ಗುರುಮಿಠಕಲ್ ಕ್ಷೇತ್ರದಲ್ಲಿ ಟಿಕೆಟ್ ಪಡೆದಿದ್ದಾರೆ. ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಬಾದಾಮಿ ಬಿ.ಬಿ. ಚಿಮ್ಮನಕಟ್ಟಿ, ಗುಬ್ಬಿ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಬಂದಿದ್ದ ಎಸ್.ಆರ್.ಶ್ರೀನಿವಾಸ್ ಟಿಕೆಟ್ ಪಡೆದಿದ್ದಾರೆ. ಮಂಡ್ಯದಲ್ಲಿ ಡಿಕೆಶಿ ಆಪ್ತ ರವಿಕುಮಾರ್ ಗಣಿಗ, ಮೇಲುಕೋಟೆಯಲ್ಲಿ ರೈತ ಸಂಘದ ಕೆಎಸ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ

Congress releases second list of 42 candidates for Karnataka Assembly elections pic.twitter.com/wzpumgNTf3

— ANI (@ANI) April 6, 2023

Youth leader Prasad Raj Kanchan has been given the election ticket to contest from the Udupi constituency. As expected, the Congress gave the ticket to a candidate from the Mogaveera community. Prasad Raj has already started campaigning. It is said that that three names were in the final list for the Congress ticket from Udupi. Finally, Prasad Raj Kanchan was selected.