ಬ್ರೇಕಿಂಗ್ ನ್ಯೂಸ್
11-04-23 10:07 pm HK News Desk ಕರ್ನಾಟಕ
ನವದೆಹಲಿ, ಎ.11: ರಾಜ್ಯ ಅಸೆಂಬ್ಲಿ ಚುನಾವಣೆಗೆ ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕಡೆಗೂ ರಿಲೀಸ್ ಆಗಿದೆ. ಮೊದಲ ಹಂತದಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ದೆಹಲಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದರು.
ಈ ಬಾರಿ ವಿಭಿನ್ನ ರೀತಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ರಾಜ್ಯದ 31 ಜಿಲ್ಲೆಗಳಲ್ಲಿ 31 ಸಾವಿರ ಕಾರ್ಯಕರ್ತರಿಂದಲೇ ಮಾಹಿತಿ ಪಡೆದು, ಅದನ್ನು ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದರು. ಈ ಬಾರಿ ಎಂಟು ಮಹಿಳೆಯರು, ಹಿಂದುಳಿದ ವರ್ಗಕ್ಕೆ 32, ಎಸ್ಸಿ 30 ಜನರಿಗೆ ಟಿಕೆಟ್ ನೀಡಲಾಗಿದೆ. ಇದಲ್ಲದೆ, 9 ಮಂದಿ ವೈದ್ಯರಿಗೆ. ನಿವೃತ್ತ ಐಐಎಸ್-1, ನಿವೃತ್ತ ಐಪಿಎಸ್- 1, ನಿವೃತ್ತ ಸರಕಾರಿ ನೌಕರರು3, ಸಮಾಜ ಸೇವಾ ಕಾರ್ಯಕರ್ತರು 8, ವಕೀಲರು 5, ಶಿಕ್ಷಣ ತಜ್ಞರು ಮೂರು ಮಂದಿಗೆ ಟಿಕೆಟ್ ನೀಡಲಾಗಿದೆ.
ಉಡುಪಿ ಕ್ಷೇತ್ರದಲ್ಲಿ ಹಾಲಿ ಶಾಸಕ ರಘುಪತಿ ಭಟ್ ಗೆ ಟಿಕೆಟ್ ನಿರಾಕರಿಸಿದ್ದು, ಅಲ್ಲಿ ಮೀನುಗಾರ ಮುಖಂಡ ಯಶಪಾಲ್ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಕುಂದಾಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ಸಿಕ್ಕಿದೆ. ಕಾಪು ಕ್ಷೇತ್ರದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಟಿಕೆಟ್ ಪಡೆದಿದ್ದಾರೆ. ಕಾಪು ಹಾಲಿ ಶಾಸಕ ಲಾಲಾಜಿ ಮೆಂಡನ್ ಟಿಕೆಟ್ ಕಳಕೊಂಡಿದ್ದಾರೆ. ಕಾರ್ಕಳ ಕ್ಷೇತ್ರದಲ್ಲಿ ಶಾಸಕ ಸುನಿಲ್ ಕುಮಾರ್ ಟಿಕೆಟ್ ಪಡೆದಿದ್ದಾರೆ. ಬೈಂದೂರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಆಗಿಲ್ಲ.
ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ ಕಾಮತ್, ಉತ್ತರದಲ್ಲಿ ಭರತ್ ಶೆಟ್ಟಿ, ಮೂಡುಬಿದ್ರೆ – ಉಮಾನಾಥ ಕೋಟ್ಯಾನ್, ಬೆಳ್ತಂಗಡಿ- ಹರೀಶ್ ಪೂಂಜ, ಉಳ್ಳಾಲದಲ್ಲಿ ಸತೀಶ್ ಕುಂಪಲ, ಪುತ್ತೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಬದಲಿಗೆ ಆಶಾ ತಿಮ್ಮಪ್ಪ ಗೌಡ, ಸುಳ್ಯದಲ್ಲಿ ಆರು ಬಾರಿಯ ಶಾಸಕ ಎಸ್. ಅಂಗಾರ ಬದಲು ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ಹಾಲಿ ಸಚಿವ ವಿ.ಸೋಮಣ್ಣ ಅವರನ್ನು ಎರಡು ಕಡೆ ಕಣಕ್ಕಿಳಿಸಿದ್ದು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಪದ್ಮನಾಭ ನಗರ ಮತ್ತು ಕನಕಪುರದಲ್ಲಿ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮತ್ತೊಬ್ಬ ಪ್ರಬಲ ಒಕ್ಕಲಿಗ ಅಶೋಕ್ ಸ್ಪರ್ಧೆ ಮಾಡಲಿದ್ದಾರೆ. ಹಾಲಿ ಒಂಬತ್ತು ಶಾಸಕರಿಗೆ ಟಿಕೆಟ್ ನಿರಕಾರಣೆ ಮಾಡಲಾಗಿದೆ. 35 ಕ್ಷೇತ್ರಗಳ ಅಭ್ಯರ್ಥಿ ಫೈನಲ್ ಮಾಡಿಲ್ಲ. ಜಗದೀಶ್ ಶೆಟ್ಟರ್, ಈಶ್ವರಪ್ಪ ಸ್ಥಾನ ಕಳಕೊಂಡಿದ್ದಾರೆ. ಈಶ್ವರಪ್ಪ ಬದಲು ಪುತ್ರನಿಗೂ ಟಿಕೆಟ್ ಸಿಕ್ಕಿಲ್ಲ.
The Central Election Committee of the BJP has decided the names of 189 candidates, in the first list, for the ensuing general elections to the legislative assembly of Karnataka. (1/2) pic.twitter.com/RhGFuhCWwS
— BJP (@BJP4India) April 11, 2023
The Bharatiya Janata Party (BJP) released the first list of 189 candidates who will be contesting the Karnataka Assembly polls. Of the 189 candidates, 52 are new faces who have been given the tickets. Asha Thimmappa for Puttur, Bhagirathi Muruly for Sullia, Yashpal Suvarna for udupi, The list includes 32 candidates from the OBC community, 30 from SC and 16 from the ST community. The list has 31 PhD holders and 31 candidates who have post-graduate degrees.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm