ಬ್ರೇಕಿಂಗ್ ನ್ಯೂಸ್
12-04-23 07:59 pm HK News Desk ಕರ್ನಾಟಕ
ಶಿವಮೊಗ್ಗ, ಎ.12: ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಟಿಕೆಟ್ ವಿಚಾರ ಇದೀಗ ಬಿಜೆಪಿಯಲ್ಲಿ ಬಂಡಾಯದ ಬಾವುಟ ಜೋರಾಗಿದೆ. ಪಕ್ಷದ ಹಿರಿಯ ನಾಯರ ಕೆಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೇ ಹಲವು ಹಿರಿಯ ನಾಯಕರು ಪಕ್ಷ ತೊರೆಯುತ್ತಿದ್ದಾರೆ.
ಲಕ್ಷ್ಮಣ್ ಸವದಿ ಬೆನ್ನಲ್ಲೇ ಆರ್ ಶಂಕರ್ ಬಿಜೆಪಿ ತೊರೆದಿದ್ದಾರೆ. ಇತ್ತ ಈಶ್ವರಪ್ಪ ರಾಜೀಮಾಮೆ ಎಫೆಕ್ಟ್ ಇಷ್ಟಕ್ಕೆ ನಿಂತಿಲ್ಲ. ರಾಜೀನಾಮೆಯಿಂದ ಬೇಸತ್ತು, ಶಿವಮೊಗ್ಗ ಮಹಾನಗರ ಪಾಲಿಕೆಯ 19 ಸದಸ್ಯರು ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ. ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷಕರು ಹಾಗೂ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮಾಜಿ ಸಚಿವ ಈಶ್ವರಪ್ಪನವರಿಗೆ ಟಿಕೆಟ್ ನಿರಾಕರಿಸಿದ ಕಾರಣ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಪಕ್ಷದ ಸೂಚನೆಯಂತೆ ನಡೆದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಕಟ್ಟಿದ ಹಿರಿಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಪಾಲಿಗೆ ಸದಸ್ಯರು ಆರೋಪಿಸಿದ್ದಾರೆ. ಹೀಗಾಗಿ ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಹುಟ್ಟು ಹಾಕಿ, ರಾಜ್ಯದಲ್ಲಿ ಪಕ್ಷವನ್ನು ಈ ಮಟ್ಟಕ್ಕೆ ಬೆಳೆಯಲು ಕಾರಣರಾಜ ಮಹನೀಯರಲ್ಲಿ ಬಿಎಸ್ ಯಡಿಯೂರಪ್ಪ, ದಿವಂಗತ ಅನಂತ್ ಕುಮಾರ್ ಹಾಗೂ ಕೆಎಸ್ ಈಶ್ವರಪ್ಪನ ಅಗ್ರಮಾನ್ಯರು. ಈಶ್ವರಪ್ಪ ತಮ್ಮದೇ ವ್ಯಕ್ತಿತ್ವ ಹಾಗೂ ವರ್ಚಸ್ಸಿನ ಮೂಲಕ ಇಡೀ ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಿದ್ದಾರೆ. ಶಿವಮೊಗ್ಗ ನಗರದ ಶಾಸಕರಾಗಿ, ರಾಜ್ಯ ಸರ್ಕಾರದ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ಜನಪ್ರಿಯ ನಾಯಕರನ್ನು ವಯಸ್ಸಿನ ಕಾರಣ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸೂಚಿಸಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಪತ್ರವನ್ನು ಪಡೆದಿದ್ದಾರೆ. ಕೇಂದ್ರದ ಬಿಜೆಪಿ ವರಿಷ್ಠರ ನಿರ್ಧಾರ ಆತಂಕಕಾರಿಯಾಗಿದೆ. ಇದೇ ವಯಸ್ಸಿನ ಬೇರೆ ನಾಯಕರಿಗೆ ಇತರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಆದರೆ ಈಶ್ವರಪ್ಪನವರಿಗೆ ಟಿಕೆಟ್ ನಿರಾಕರಿಸಲಾಗಿದೆ. ನಮ್ಮಂತ ನಾಯಕರನ್ನು ಗುರುತಿಸಿ ಬೆಳೆಸಿದ ಸಂಪೂರ್ಣ ಶ್ರೇಯಸ್ಸು ಈಶ್ವರಪ್ಪನವರಿಗೆಸಲ್ಲುತ್ತದೆ. ಬಿಜೆಪಿ ಹೈಕಮಾಂಡ್ ಅನಿರೀಕ್ಷಿತ ನಡೆಯನ್ನು ವಿರೋಧಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸುತ್ತಿದ್ದೇವೆ ಎಂದು 19 ಬಿಜೆಪಿ ನಾಯಕರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ , ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ್ ಸೇರಿದಂತೆ 19 ಪಾಲಿಕೆ ಸದಸ್ಯರಿಂದ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ನೀಡಿದ್ದಾರೆ. ಇದೇ ವೇಳೆ ಈಶ್ವರಪ್ಪನವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. ಇದೀಗ ಈಶ್ವರಪ್ಪ ರಾಜೀನಾಮೆ ವಿಚಾರ ಭಾರಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಈಶ್ವರಪ್ಪ ಕಾರ್ಯಕರ್ತರು, ಬೆಂಬಲಿಗರಿಗೆ ಸಮಾಧಾನ ಪಡಿಸುವ ಕಾರ್ಯವನ್ನೂ ಮಾಡಿದ್ದಾರೆ. ಆದರೆ ಬೆಂಬಲಿಗರು ಸುಮ್ಮನಾಗಿಲ್ಲ. ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ 34 ವರ್ಷಗಳಿಂದ ಸ್ಪರ್ಧಿಸಿ ಸೋಲು-ಗೆಲುವುಗಳ ಮೂಲಕ ಬಿಜೆಪಿಗೆ ಮತ್ತು ತಮ್ಮ ವರ್ಚಸ್ಸಿಗೆ ಭದ್ರ ಬುನಾದಿ ಹಾಕಿದ್ದ ಈಶ್ವರಪ್ಪ ಮಂಗಳವಾರ ಮಧ್ಯಾಹ್ನ ಯಾರಿಗೂ ಸುಳಿವು ನೀಡದೆ ನೇರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ತಮ್ಮ ಚುನಾವಣಾ ನಿವೃತ್ತಿ ಪ್ರಕಟಿಸಿದ್ದರು.
Several leaders and office bearers of the Bharatiya Janata Party (BJP) in Karnataka's Shivamogga district have tendered mass resignation in support of senior leader and former Deputy Chief Minister KS Eshwarappa
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm