ಬ್ರೇಕಿಂಗ್ ನ್ಯೂಸ್
12-04-23 10:56 pm HK News Desk ಕರ್ನಾಟಕ
ದಾವಣಗೆರೆ, ಎ.12 : ಆನ್‌ಲೈನ್ ಪ್ರಚಾರ ತಂತ್ರದ ಮೂಲಕ ಮತದಾರರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು ಚುನಾವಣೆ ಅಧಿಕಾರಿಗಳು ದಾಳಿ ನಡೆಸಿ 60ಕ್ಕೂ ಹೆಚ್ಚು ಲ್ಯಾಪ್‌ಟಾಪ್ ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಯಾವುದೇ ಅನುಮತಿ ಪಡೆಯದೆ ಟೆಲಿ ಕಾಲರ್ ಮೂಲಕ ಮತದಾರರ ಸೆಳೆಯುವ ಪ್ರಯತ್ನ ನಡೆಯುತ್ತಿದ್ದ ಬಗ್ಗೆ ದೂರು ಬಂದಿದ್ದರಿಂದ ಅಧಿಕಾರಿಗಳು ದಾಳಿ ನಡೆಸಿದ್ದರು.
ದಾವಣಗೆರೆ ನಗರದ ಚೇತನ ಹೊಟೇಲ್ ಎದುರುಗಡೆ ಇರುವ ರಾಮಕೃಷ್ಣ ಆರ್ಥೋಪೆಡಿಕ್ ಎಸೆನ್ಷಿಯಲ್ಸ್ ಆಸ್ಪತ್ರೆ ಕಟ್ಟಡದ ಕಚೇರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ 60ಕ್ಕೂ ಜನರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತಿತ್ತು. ಟೆಲಿಕಾಲ್ ಮೂಲಕ ಕರೆ ಮಾಡಿ ಕಳೆದ ಐದು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಸಾಧನೆ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಹೇಳುವುದು, ಬಿಜೆಪಿಯ ಕಮಲ ಗುರುತಿಗೆ ಮತ ಚಲಾಯಿಸುವಂತೆ ಆಮಿಷ ಒಡ್ಡುವ ರೀತಿಯಲ್ಲಿ ಮತದಾರರ ಸೆಳೆಯುವ ತಂತ್ರಗಾರಿಕೆ ಮಾಡಲಾಗುತಿತ್ತು ಎನ್ನುವ ಆರೋಪ ಕೇಳಿಬಂದಿದೆ.
60ಕ್ಕೂ ಹೆಚ್ಚು ಟೆಲಿ ಕಾಲರ್‌ಗಳನ್ನು ಈ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಸೂರ್ಯ ಎಂಬವರ ಹೆಸರಿನಲ್ಲಿ ಅಗ್ರಿಮೆಂಟ್ ಆಗಿದ್ದ ಕಚೇರಿಯನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ. ಸ್ಥಳೀಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಬಿಜೆಪಿ ಸಾಧನೆಗಳ ಬಗ್ಗೆ, ಕಾಂಗ್ರೆಸ್ ಪಕ್ಷದ ಅವಹೇಳನ ಕೆಲಸಕ್ಕೆ ಇವರನ್ನು ನಿಯೋಜನೆ ಮಾಡಲಾಗಿತ್ತು ಎಂಬ ದೂರು ಕೇಳಿಬಂದಿದೆ. ಬಿಜೆಪಿಗೆ ಮತ ಹಾಕುವಂತೆ ಆಮಿಷ ಹಾಗೂ ವೆಬ್ ಸೈಟ್, ವ್ಯಾಟ್ಸಪ್ ಗ್ರೂಪ್ ಮಾಡಿ ಕಾಂಗ್ರೆಸ್ ತೇಜೋವಧೆ ಮಾಡಲಾಗುತಿತ್ತು ಎಂದು ದೂರಲಾಗಿದೆ.
ಆನ್ ಲೈನ್ ಪ್ರಚಾರ ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ದಾಳಿ ನಡೆಸಿದ್ದು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅನುಮತಿ ಪಡೆಯದೇ ಮತದಾರರನ್ನು ಆನ್ ಲೈನ್ ಮೂಲಕ ಸೆಳೆಯಲು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ಯುದ್ಧ ನಡೆಸಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಧಿಕಾರಿಗಳು ಲ್ಯಾಪ್ ಟಾಪ್ ಸೀಜ್ ಮಾಡಿ ತೆರಳಿದ್ದಾರೆ. ಕಚೇರಿಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
The BHARATIYA Janata Party (BJP) has seized more than 60 laptops and other electronic items in a raid to woo voters through its online campaign strategy. The raid was conducted after a complaint was received that an attempt was being made to woo voters through tele-caller without obtaining any permission.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm