ಬ್ರೇಕಿಂಗ್ ನ್ಯೂಸ್
14-04-23 10:16 am HK News Desk ಕರ್ನಾಟಕ
ಶಿರಸಿ, ಎ.14: ನಾನು ನನ್ನ ಕಾರ್ಯಕರ್ತರಿಗೆ ಮೋಸ ಮಾಡಲು ಸಾಧ್ಯವಿಲ್ಲ. ಪುನಃ ಸ್ಪರ್ಧೆ ಮನಸ್ಸೂ ಇದೆ ಜೊತೆಗೆ ವಯಸ್ಸೂ ಇದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ಶಿರಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಗುರುವಾರ ರಾತ್ರಿ ರಾಜೀನಾಮೆ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದರು. ಸ್ವತಂತ್ರವಾಗಿ ನಿಲ್ಲಬೇಕು ಎಂಬ ಮನಸ್ಸಿದೆ ಆದರೆ ಚಿಹ್ನೆ ಬೇಕಾಗಿದೆ ಎಂಬ ಮಾತೂ ಇದೆ. ರಾಜೀನಾಮೆ ಕೊಟ್ಟ ನಂತರ ಎರಡು ದಿನದಲ್ಲಿ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. 2008ರಲ್ಲಿ, 2013ರಲ್ಲಿ ಸ್ವತಂತ್ರವಾಗಿ ನಿಂತಿದ್ದೆ.
2018ರಲ್ಲಿ ಬಿಜೆಪಿ ಸೇರಿದೆ. ಆಗ ಅಧಿಕಾರಕ್ಕೆ ಬರಲು ಕಾರಣ ಇರಬಹುದು. ಆದರೆ, ಈಗ ಟಿಕೆಟ್ ಗೆ ಸಾಮಾಜಿಕ ನ್ಯಾಯ ಎಂದು ಬಿಜೆಪಿಯವರು ಪ್ರಸ್ತಾಪ ಮಾಡಿದ್ದಾರೆ. ಯಡಿಯೂರಪ್ಪ ಅವರ ಶಿಷ್ಯ ಹಾಗೂ ಅವರ ಮಗ ವಿಜಯೇಂದ್ರರ ಗೆಳೆಯಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವದಿಲ್ಲ ಎಂದರು.
ಯಾರಿಗೆ ಟೀಕೆ ಮಾಡಿ ಏನು ಪ್ರಯೋಜನವಿಲ್ಲ. ಜೆಡಿಎಸ್ ಹಾಗೂ ಎನ್ ಪಿಪಿ, ರೆಡ್ಡಿ ಪಕ್ಷದಿಂದಲೂ ಪಕ್ಷಕ್ಕೆ ಬರುವಂತೆ ಹೇಳುತ್ತಿದ್ದಾರೆ ಎಂದರು. ಇತ್ತ ಬಿಜೆಪಿ ಅಸಮಾಧಾನಿತರಿಗೆ ಗಾಳ ಹಾಕುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಕ್ಕೆ ಸೆಳೆಯಲು ಪ್ರಯತ್ನ ನಡೆಸಿದ್ದು, ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
BJP leader Goolihatti Shekhar submitted his resignation to Legislative Assembly Speaker Vishweshwar Hegde Kageri at the latter’s residence in Sirsi on Thursday night. Shekhar also resigned from the primary membership of the BJP after he was denied a ticket in the Karnataka Assembly elections.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm