ಬಂಡಾಯಕ್ಕೆ ಥಂಡಾ ಹೊಡೆದ ಬಿಜೆಪಿ ; ಡ್ಯಾಮೇಜ್ ಕಂಟ್ರೋಲ್ ಯತ್ನ, ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ ಮುಖಂಡರ ಸಭೆ  

19-04-23 10:21 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿ ಲಿಂಗಾಯತ ಮುಖಂಡರು, ಶಾಸಕರಾಗಿದ್ದ ಪ್ರಮುಖರು ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವುದರಿಂದ ಬಿಜೆಪಿ ಹೈಕಮಾಂಡ್ ಚಿಂತೆಗೀಡಾಗಿದೆ.

ಬೆಂಗಳೂರು, ಎ.19: ರಾಜ್ಯದಲ್ಲಿ ಲಿಂಗಾಯತ ಮುಖಂಡರು, ಶಾಸಕರಾಗಿದ್ದ ಪ್ರಮುಖರು ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವುದರಿಂದ ಬಿಜೆಪಿ ಹೈಕಮಾಂಡ್ ಚಿಂತೆಗೀಡಾಗಿದೆ. ಮೊದಲಿನಿಂದಲೂ ಬಿಜೆಪಿ ಭದ್ರ ಮತಬ್ಯಾಂಕ್ ಆಗಿದ್ದ ಲಿಂಗಾಯತ ಸಮುದಾಯ ಪಕ್ಷದ ಕೈಬಿಟ್ಟು ಹೋಗುತ್ತಾ ಎನ್ನುವ ಆತಂಕದಲ್ಲಿ ನಾಯಕರು ಬೆಂಗಳೂರಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ಬುಧವಾರ ಸಂಜೆ ತುರ್ತಾಗಿ ಸಭೆ ಕರೆಯಲಾಗಿದ್ದು ಉತ್ತರ ಕರ್ನಾಟಕ ಭಾಗದ ಲಿಂಗಾಯತ ಮುಖಂಡರು, ಬಿಜೆಪಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯ ಮೇರೆಗೆ ಯಡಿಯೂರಪ್ಪ ನಿವಾಸದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಲ್ಲದೆ, 40ರಷ್ಟು ಲಿಂಗಾಯತ ಮುಖಂಡರು ಭಾಗಿಯಾಗಿದ್ದಾರೆ.

JP Nadda slams Samajwadi party opposition Uttar Pradesh Jinnah is theirs  ganna is ours latest elections updates | Elections News – India TV

BJP on tenterhooks in poll-bound Karnataka as ticket distribution sparks  rebellion | Deccan Herald

ಹಿರಿಯ ನಾಯಕರಾದ ಜಗದೀಶ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಿದೆ ಎನ್ನುವ ಮಾತು ಕೇಳಿಬಂದಿದೆ. ಇದರಿಂದ ಲಿಂಗಾಯತ ಸಮುದಾಯಕ್ಕೆ ತಮ್ಮನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಸಂದೇಶ ಹೋಗಿದೆ ಎನ್ನಲಾಗುತ್ತಿದೆ. ಇದಲ್ಲದೆ, ಲಿಂಗಾಯತ ಸಿಎಂ ಆಗಲ್ಲ. ಬಿಜೆಪಿ ಬ್ರಾಹ್ಮಣ ಮುಖ್ಯಮಂತ್ರಿ ತರಲು ಕಸರತ್ತು ನಡೆಸುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪದಿಂದಾಗಿ ಬಿಜೆಪಿ ದಿಕ್ಕೆಟ್ಟಿದೆ. ಇದೇ ಕಾರಣಕ್ಕೆ ವೀರಶೈವ- ಲಿಂಗಾಯತ ಸಮುದಾಯದ ಮುಖಂಡರ ಸಭೆಯನ್ನು ಕರೆಯಲಾಗಿದೆ. ಹಿಂದಿನಿಂದಲೂ ಪಕ್ಷದ ಕೈಹಿಡಿದಿದ್ದ ಲಿಂಗಾಯತರು ಈ ಬಾರಿ ಚುನಾವಣೆ ಹೊತ್ತಿಗೆ ಕೈಬಿಟ್ಟರೆ ಬಿಜೆಪಿಗೆ ಬಹುದೊಡ್ಡ ಹಿನ್ನಡೆಯಾಗಲಿದೆ. ಸಭೆಯಲ್ಲಿ ಯಡಿಯೂರಪ್ಪ ವಿರೋಧಿಯಾಗಿ ಗುರುತಿಸಿಕೊಂಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಕೂಡ ಭಾಗವಹಿಸಿದ್ದು ಕುತೂಹಲ ಮೂಡಿಸಿದೆ.

ಚುನಾವಣೆ 2023: ಅಕ್ರಮ ಆಸ್ತಿ ಪ್ರಕರಣ- ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ |  Illegal property case: Petition filed by Renukacharya dismissed - Kannada  Oneindia

ಪ್ರಭಾಕರ ಕೋರೆ, ರೇಣುಕಾಚಾರ್ಯ ಆದಿಯಾಗಿ ಲಿಂಗಾಯತ ಸಂಸದರು, ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದು, ಸಭೆಯ ನೇತೃತ್ವವನ್ನು ಯಡಿಯೂರಪ್ಪ ವಹಿಸಿಕೊಂಡಿದ್ದರು. ಲಿಂಗಾಯತರ ನಾಯಕ ಎಂದೇ ಗುರುತಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಸೂಚನೆ ಮೇರೆಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಶಾಸಕರು ಬಿಜೆಪಿಯಿಂದ ಲಿಂಗಾಯತರ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಬೇಕೆಂದು ಆಗ್ರಹ ಮಾಡಿದ್ದಾರೆ.

 Former Chief Minister Jagdish Shettar and former Deputy Chief Minister Lakshmana Savadi have left the BJP and joined the Congress. In the background, Congress and BJP have come down to damage control for Lingayat votes. Congress has been constantly trying to woo the Lingayat community.