ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್‌ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.
1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್‌ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್‌ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am