ಬ್ರೇಕಿಂಗ್ ನ್ಯೂಸ್
21-04-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ಎ.21 : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಿದ್ದು, ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%), ಉಡುಪಿಗೆ ಎರಡನೇ ಸ್ಥಾನ( 95.24%), ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಪರೀಕ್ಷೆಗೆ 727,923 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 725,821 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. 23,754 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಪರೀಕ್ಷೆಗೆ ಗೈರಾಗಿದ್ದಾರೆ. 702,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 524,209 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. 2023 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,02,067 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.
ದಕ್ಷಿಣಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ, ಯಾದಗಿರಿ ಕೊನೆಯ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
The Karnataka Board of Secondary Education has informed that 5.24 lakh students have passed the second PUC final examination result today. Karnataka Higher Education Examination Board officials announced the result in a press conference today, a total of 5,24,209 students have passed the examination.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm