ಚಿಕ್ಕಮಗಳೂರು; ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ದಂಪತಿ‌ ಸ್ಥಳದಲ್ಲೇ ಸಾವು 

21-04-23 10:47 pm       HK News Desk   ಕರ್ನಾಟಕ

ಮರಕ್ಕೆ ಕಾರು ಢಿಕ್ಕಿ ಹೊಡೆದು ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ.

ಚಿಕ್ಕಮಗಳೂರು, ಎ.21: ಮರಕ್ಕೆ ಕಾರು ಢಿಕ್ಕಿ ಹೊಡೆದು ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಭದ್ರಾವತಿಗೆ ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿಗಳು. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Chikmagalur accident, couple killed after car rams tree aftee losing control.