ಬ್ರೇಕಿಂಗ್ ನ್ಯೂಸ್
25-04-23 10:24 pm Bangalore Correspondent ಕರ್ನಾಟಕ
ಬೆಂಗಳೂರು, ಎ.25 : ರಾಜ್ಯ ಸರ್ಕಾರ ಇತ್ತೀಚೆಗೆ ಮುಸ್ಲಿಮ್ ಸಮುದಾಯಕ್ಕಿದ್ದ ಶೇ.4ರ ಮೀಸಲು ರದ್ದು ಪಡಿಸಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು ಮೇ 9ರ ವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಿದೆ. ಚುನಾವಣೆ ಹೊತ್ತಲ್ಲಿ ಈ ರೀತಿಯ ಆದೇಶ ನೀಡಿರುವುದು ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸುಪ್ರೀ ಕೋರ್ಟ್ ಮುಂದಿನ ವಿಚಾರಣೆಯನ್ನು ಮೇ 9 ಕ್ಕೆ ನಿಗದಿಪಡಿಸಿದ್ದು ಅಂದು ರಾಜ್ಯ ಸರ್ಕಾರದ ಅಭಿಪ್ರಾಯ ನೀಡಲು ಸೂಚಿಸಿದೆ. ಕರ್ನಾಟಕದಲ್ಲಿ ಒಬಿಸಿ ಕೋಟಾದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಶೇ.4 ಮೀಸಲಾತಿ ಜಾರಿಯಲ್ಲಿತ್ತು. ಕಳೆದ ಮಾರ್ಚ್ 27 ರಂದು ಕರ್ನಾಟಕ ಸರ್ಕಾರವು ಈ ಮೀಸಲನ್ನು ರದ್ದುಪಡಿಸಿ, ಅದರ ಪಾಲನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ ಶೇ.2 ರಂತೆ ಹಂಚಿಕೆ ಮಾಡಿ ಮೀಸಲು ಹೆಚ್ಚಿಸಿತ್ತು.
ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ಕೋಟಾವನ್ನು ರದ್ದುಗೊಳಿಸಿದ ಸರ್ಕಾರದ ಆದೇಶ ದೋಷಪೂರಿತ ಕ್ರಮ ಎಂದು ಸುಪ್ರೀಂ ಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ಅಭಿಪ್ರಾಯ ಪಟ್ಟಿತ್ತು. ಅಲ್ಲದೆ, ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿತ್ತು. ಮಂಗಳವಾರ ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ವಿವರಣೆ ನೀಡಲು ವಿಫಲವಾಗಿದ್ದು ಅರ್ಜಿದಾರರ ವಾದ ಆಲಿಸಿದ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಹಾಗೂ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿ ತೀರ್ಪು ಪ್ರಕಟಿಸಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಕಳೆದ ಮಾರ್ಚ್ 27 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಈ ಆದೇಶವನ್ನು ಪ್ರಶ್ನಿಸಿ ಎಲ್. ಗುಲಾಮ್ ರಸೂಲ್ ಮತ್ತು ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮುಸ್ಲಿಮರ ಮೀಸಲನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಅವರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್) ಪಟ್ಟಿಗೆ ಸೇರಿಸುವ ನಿರ್ಧಾರವನ್ನು ತೆಗೆದುಕೊಂಡಿತ್ತು.
The Supreme Court on Tuesday directed that the Karnataka government’s decision to scrap four percent quota for Muslims will not be implemented till May 9 after the state sought time to file its reply. A bench of Justices KM Joseph and BV Nagarathna said the earlier regime of four percent quota to Muslims will continue to hold field till May 9, when the matter will be heard next, without any prejudice to the contentions to be raised by the state government.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm