ಬ್ರೇಕಿಂಗ್ ನ್ಯೂಸ್
27-04-23 11:15 am Bangalore Correspondent ಕರ್ನಾಟಕ
ಬೆಂಗಳೂರು, ಎ.27: ಪ್ರಧಾನಿ ಮೋದಿ ರಾಜ್ಯದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವರ್ಚುವಲ್ ಮೀಟ್ ಮೂಲಕ ಭಾಷಣ ಮಾಡಿದ್ದಾರೆ. ಭಾಷಣದ ಉದ್ದಕ್ಕೂ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಬಗ್ಗೆ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಈ ಹಿಂದೆ ರಾಜಸ್ಥಾನ, ಹಿಮಾಚಲ ಪ್ರದೇಶದಲ್ಲಿ ಇದೇ ರೀತಿ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿತ್ತು. ಆದರೆ ಘೋಷಣೆ ಈಡೇರಿಸಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗಿರಲಿಲ್ಲ. ರಾಜಸ್ಥಾನದಲ್ಲಿ ಜನರು ಗ್ಯಾರಂಟಿ ಘೋಷಣೆ ಹೆಸರಲ್ಲಿ ಪ್ರತಿಭಟನೆಯನ್ನೂ ಮಾಡಿದರು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳಿನ ಗ್ಯಾರಂಟಿ ಘೋಷಣೆ ಮಾಡಿದೆ.
ಕಾಂಗ್ರೆಸ್ ಗ್ಯಾರಂಟಿ ಭ್ರಷ್ಟಾಚಾರದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ ಮಾತ್ರ ಆಗಿರುತ್ತದೆ. ಹಾಗಾಗಿ ಪಕ್ಷದ ಕಾರ್ಯಕರ್ತರು ಪ್ರತಿ ಹಳ್ಳಿಗೆ ಹೋಗಿ ಜನರಿಗೆ ಕಾಂಗ್ರೆಸ್ ಸುಳ್ಳಿನ ಬಗ್ಗೆ ಹೇಳಬೇಕಾಗಿದೆ. ಕರ್ನಾಟಕದ ಜನರ ಬಗ್ಗೆ ನನಗೆ ವಿಶ್ವಾಸ ಇದೆ. ಡಬಲ್ ಇಂಜಿನ್ ಸರ್ಕಾರಕ್ಕೆ ಜನರು ಮತ ನೀಡಲಿದ್ದಾರೆ ಎಂದರು ಮೋದಿ.
ಕರ್ನಾಟಕದ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಹಾಗಾಗಿ ಅಭಿವೃದ್ಧಿಗೆ ಜನರು ಮತ ನೀಡಬೇಕಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಲಾಭ ಆಗುತ್ತದೆ. ಕನ್ನಡಿಗರ ಬಗ್ಗೆ ನನಗೆ ತುಂಬಾ ಗೌರವ ಇದೆ. ಕಾಂಗ್ರೆಸ್ ಘೋಷಿಸಿರುವ ಉಚಿತ ಯೋಜನೆಗಳಿಗೆ ಜನರು ಬಲಿಬೀಳಲ್ಲ ಎಂಬ ವಿಶ್ವಾಸ ಇದೆ. ಕರ್ನಾಟಕದಲ್ಲಿ ಯುವ ಜನರು ಹೆಚ್ಚಿದ್ದಾರೆ. ಯುವಕರ ಕರ್ನಾಟಕ ಇದೆ. 20ರಿಂದ 40ರ ಒಳಗಿನ ವಯೋಮಾನದ ಯುವ ಜನರು ದೇಶದಲ್ಲಿ ಅತಿ ಹೆಚ್ಚು ಇದ್ದಾರೆ. ಮುಂದಿನ 25 ವರ್ಷದ ಭಾರತದ ಪಾಲಿಗೆ ಅಮೃತದ ಕಾಲ. ಇದಕ್ಕಾಗಿ ದೇಶದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ. ಬೆಂಗಳೂರು, ಮೈಸೂರು, ಶಿವಮೊಗ್ಗ ಸಮಾನ ಅಭಿವೃದ್ಧಿ ಕಾಣುತ್ತಿದೆ. ಮೆಟ್ರೋ, ರೈಲು ಸೇವೆ, ಏರ್ಪೋರ್ಟ್ ಹೀಗೆ ಮೂಲ ಸೌಕರ್ಯ ಹೆಚ್ಚಿಸುವುದು ನಮ್ಮ ಆದ್ಯತೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಾಗಿದೆ ಎಂದು ಮೋದಿ ಹೇಳಿದರು.
ಪ್ರಧಾನಿ ಮೋದಿ ವರ್ಚುವಲ್ ಮೀಟಿಂಗ್ ಲೈವ್ ಆಗಿ ಕಾಣಲು ಪ್ರತಿ ಜಿಲ್ಲೆಯಲ್ಲಿ, ಪ್ರತಿ ತಾಲೂಕು ಕೇಂದ್ರದಲ್ಲಿ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯಾದ್ಯಂತ ಆಯಾ ಭಾಗದಲ್ಲಿ ಅಭ್ಯರ್ಥಿಗಳು, ಕಾರ್ಯಕರ್ತರು, ಪಕ್ಷದ ನಾಯಕರು ಭಾಗವಹಿಸಿದ್ದರು. ಸುಮಾರು 50 ಲಕ್ಷ ಕಾರ್ಯಕರ್ತರು ರಾಜ್ಯದಲ್ಲಿ ಮೋದಿ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.
PM Modi interacts with Karnataka BJP karyakartas via video coneferencing, slams Congress party over lies. The live virtual meet is connected to Mangalore, Hubli, Mysuru and Shivamogga.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am