ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ ; ಕಾರಿನಲ್ಲೇ ವೈದ್ಯರಿಂದ ಉಪಚಾರ, ಕೂಡ್ಲಗಿ ಹೆಲಿಪ್ಯಾಡ್ ಬಳಿ ಘಟನೆ

29-04-23 02:32 pm       HK News Desk   ಕರ್ನಾಟಕ

ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.

ವಿಜಯನಗರ, ಎ.29: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ ಕೂಡ್ಲಿಗಿಗೆ ತೆರಳಿದ್ದರು.

ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್​ನಲ್ಲಿ ಬ್ಯೂಸಿ ಆದ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ನೆರವಿಗೆ ಧಾವಿಸಿ ಕೈ ಹಿಡಿದು ಎತ್ತಿದ್ದಾರೆ.

ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಲ್ಪ ಸುಸ್ತು ಆದಂತೆ ಕಂಡುಬಂದರು.

Congress leader and former Chief Minister Siddaraiamah collapsed in his car while he was on the way to campaign for the Karnataka polls on May 10. The incident occurred Saturday morning near the helipad in Vijayanagara’s Kudligi.