ಬ್ರೇಕಿಂಗ್ ನ್ಯೂಸ್
01-05-23 11:55 am Bangalore Correspondent ಕರ್ನಾಟಕ
ಬೆಂಗಳೂರು, ಮೇ.1: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಜೆಪಿ ನಡ್ಡಾ ಅವರು, ರಾಜ್ಯದ 224 ಕ್ಷೇತ್ರದ ಜನತೆ, ತಜ್ಞರ ಅಭಿಪ್ರಾಯ ಪಡೆದು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆಯಾಗಿದೆ, ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುಧಾಕರ್, "ವಿಷಯ ತಜ್ಞರಿಂದ ಸಲಹೆಗಳನ್ನು ಪಡೆದು ಪ್ರಣಾಳಿಕೆಯನ್ನು ಸಿದ್ದಪಡಿಲಾಗಿದೆ, 900ಕ್ಕೂ ಹೆಚ್ಚಿನ ಸಲಹೆಗಳನ್ನು ನೀಡಿದ್ದಾರೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಭೆಯಲ್ಲಿ ಭಾಗವಹಿಸದ್ದರು, ಕಾಂಗ್ರೆಸ್‌ನವರ ರೀತಿ ನಾವು ಸುಳ್ಳು ಭರವಸೆ ನೀಡಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ" ಎಂದು ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, "ಸುಧಾಕರ್ ನೇತೃತ್ವದಲ್ಲಿ ಒಂದು ತಂಡ ಕಳೆದ ಮೂರು ತಿಂಗಳಿನಿಂದ ಸಾಮಾನ್ಯ ಜನತೆಯಿಂದ, ಪರಿಣತರಿಂದ ಅಭಿಪ್ರಾಯಗಳನ್ನು ಪಡೆದುಕೊಂಡು ನಿಜವಾಗ ಪ್ರಜಾ ಪ್ರಣಾಳಿಕೆಯನ್ನು ರೂಪಿಸಲಾಗಿದೆ, ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ," ಎಂದರು
ಈ ಬಾರಿ ಪ್ರಣಾಳಿಕೆಯಲ್ಲಿ ಬಿಜೆಪಿ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಮೂರು ಉಚಿತ ಅಡುಗೆ ಅನಿಲ ಸಿಲಿಂಡರ್ ನೀಡುವ ಭರವಸೆ ನೀಡಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ಉಚಿತ ಹಾಲು, ತಿಂಗಳಿಗೆ 5 ಕೆಜಿ ಸಿರಿಧಾನ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ.
ಪ್ರತಿ ವಾರ್ಡ್‌ನಲ್ಲಿ ಅಟಲ್ ಆಹಾರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದು, ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ತಿಂಡಿ-ಊಟ ನೀಡುವುದಾಗಿ ತಿಳಿಸಿದೆ. ಸರ್ವರಿಗೂ ಸೂರು ಯೋಜನೆಯಡಿ ಮನೆ ಇಲ್ಲದ ಎಲ್ಲರಿಗೂ ಮನೆ ಕಟ್ಟಿಕೊಡುವ ಭರವಸೆ ನೀಡಿದೆ.
ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯಡಿ ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ 10000 ರೂಪಾಯಿ ಫಿಕ್ಸೆಡ್ ಡಿಪಾಸಿಟ್ ಮಾಡುವುದಾಗಿ ತಿಳಿಸಿದೆ. ಹಿರಿಯ ನಾಗರೀಕರಿಗೆ ಪ್ರತಿ ವರ್ಷ ಉಚಿತ ವೈದ್ಯಕೀಯ ತಪಾಸಣೆಯನ್ನು ಒದಗಿಸುವುದಾಗಿ ಹೇಳಿದೆ
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಚಿವ ಸುಧಾಕರ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿದ್ದರು.
The Bharatiya Janata Party is expected to release its poll manifesto today for the May 10 Karnataka elections. The manifesto will be released by party president JP Nadda in presence of Chief Minister Basavaraj Bommai and former Chief Minister BS Yediyurappa. The party is expected to make promises for the development of various sections of the society.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am